ಕನ್ನಡ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆ.ವಿ. ಸುಬ್ಬಣ್ಣ ಅವರದ್ದು ಚಿರಪರಿಚಿತ ಹೆಸರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಂತಹ ಕುಗ್ರಾಮದಲ್ಲಿ ಇದ್ದು ಸಾಂಸ್ಕೃತಿಕ ವಾತಾವರಣ ರೂಪಿಸಿದ ಸುಬ್ಬಣ್ಣ, ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರು. ಸಾಹಿತ್ಯ-ವಿಮರ್ಶೆ- ಪರಿಸರ-ಸಿನಿಮಾ-ರಂಗಭೂಮಿ ಹೀಗೆ ಹತ್ತು ಹಲವು ಕ್ಷೇತ್ರಗಳ ಬಗ್ಗೆ ಸುಬ್ಬಣ್ಣ ಲೇಖನಗಳನ್ನು ಬರೆದಿದ್ದು, ಉತ್ತಮ ಹಾಗೂ ಪ್ರಮುಖ ಬರಹಗಳನ್ನು ಲೇಖಕ ಟಿ.ಪಿ. ಅಶೋಕ ಅವರು ಸಂಪಾದಿಸಿದ್ದಾರೆ.
ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...
READ MORE