ಕಾದಂಬರಿ ಲೋಕ

Author : ಹಾ.ಮಾ. ನಾಯಕ

Pages 546

₹ 350.00




Year of Publication: 2013
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ವಿಶ್ವದ ಹಲವು ಪ್ರಮುಖ ಕಾದಂಬರಿಗಳನ್ನು ಅವಲೋಕಿಸಿದ ಕೃತಿ-ಕಾದಂಬರಿ ಲೋಕ. ಸಾಹಿತಿಗಳಾದ ಡಾ. ಹಾ.ಮಾ. ನಾಯಕ ಹಾಗೂ ಡಾ. ಎಂ.ವಿ. ವೆಂಕಟೇಶ ಮೂರ್ತಿ ಅವರು ಸಂಪಾದಿಸಿದ್ದಾರೆ. ವಿಶ್ವದಲ್ಲೇ ಅತ್ಯುತ್ತಮ ಎಂದು ಪರಿಗಣೀಸಲಾದ ಕಾದಂಬರಿಗಳ ವಿಶ್ಲೇಷಣೆಯ ಈ ಕೃತಿಯು ಉತ್ತಮ ಕಾದಂಬರಿಗಳ ಶ್ರೇಷ್ಠತೆಗೆ ಮಾನದಂಡಗಳು ಸೇರಿದಂತೆ ಕಾದಂಭರಿಗಳು ಕುರಿತು ಸಂಶೋಧನೆ ನಡೆಸುವ ವಿದ್ಯಾರ್ಥಿಗಳಿಗೆ ಈ ಕೃತಿ ಉಪಯುಕ್ತ.  

About the Author

ಹಾ.ಮಾ. ನಾಯಕ
(12 September 1931 - 10 November 2000)

ತಮ್ಮ ಅಂಕಣ ಬರಹಗಳಿಂದ ಪ್ರಸಿದ್ಧರಾಗಿದ್ದ ಹಾ.ಮಾ. ನಾಯಕರು (ಹಾರೋಗದ್ದೆ ಮಾನಪ್ಪನಾಯಕ) ಸಾಹಿತ್ಯ- ಸಾಂಸ್ಕೃತಿಕ ಲೋಕದ ದೊಡ್ಡ ಹೆಸರಾಗಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗದ್ದೆಯಲ್ಲಿ 1931ರ ಸೆಪ್ಟೆಂಬರ್ 12ರಂದು ಜನಿಸಿದರು. ತಂದೆ ಶ್ರೀನಿವಾಸನಾಯಕ, ತಾಯಿ ರುಕ್ಮಿಣಿಯಮ್ಮ. ಶಿವಮೊಗ್ಗೆಯಲ್ಲಿ ಶಾಲಾ ವಿದ್ಯಾಭ್ಯಾಸವನ್ನು ಪೂರೈಸಿ ಕಾಲೇಜು ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿಯೂ ಸ್ನಾತಕೋತ್ತರ ಶಿಕ್ಷಣವನ್ನು ಕಲ್ಕತ್ತೆಯಲ್ಲಿಯೂ ಮಾಡಿ ಭಾಷಾವಿಜ್ಞಾನದಲ್ಲಿ ಎಂ.ಎ. (1958)ಪದವಿಯನ್ನು ಪಡೆದರು. ತುಮಕೂರಿನಲ್ಲಿ ಕನ್ನಡ ಅಧ್ಯಾಪಕ (1955) ಆಗುವ ಮೂಲಕ ತಮ್ಮ ವೃತ್ತಿಯನ್ನು ಪ್ರಾರಂಭಿಸಿದ್ದ ಅವರು ಅನಂತರ ಪ್ರವಾಚಕ, ಪ್ರಾಧ್ಯಾಪಕ, ನಿರ್ದೇಶಕರಾಗಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದರು. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಕುಲಪತಿ (1984) ...

READ MORE

Related Books