ಲೇಖಕ ಗಂಗಾರಾಂ ಚಾಂಡಾಳ ಅವರ ಲೇಖನಗಳ ಕೃತಿ-ಕಾಲ ಕಾಲ್ಯ. ಮಂಡ್ಯದ ಬೆಳಕು ಸಮಾಜ ಸಂಘಟನೆಯ ಮಾಸಪತ್ರಿಕೆ ‘ಕಾಲಕಾಲ್ಯ’ ದಲ್ಲಿ ಸುಮಾರು 20 ತಿಂಗಳು ಕಾಲ ಈ ಲೇಖಕರು ಬರೆದ ಅಂಕಣಗಳ ಸಂಗ್ರಹ ಕೃತಿ. ಇವುಗಳಲ್ಲಿ ಚಿಂತನಾತ್ಮಕ ಬರಹಗಳು, ಕವನಗಳು ಸೇರಿವೆ. ವಿಷಯ ವೈವಿಧ್ಯತೆ ಹಾಗೂ ನಿರೂಪಣಾ ಶೈಲಿಯಿಂದ ಇಲ್ಲಿಯ ಅಂಕಣಗಳ ಬರಹಗಳು ಓದುಗರ ಗಮನ ಸೆಳೆಯುತ್ತವೆ.
ಲೇಖಕ ಗಂಗಾರಾಂ ಚಂಡಾಳ ಅವರು ಕೋಲಾರ ಜಿಲ್ಲೆಯ ಯಡಹಳ್ಳಿ (ಜನನ: 18-06-1961) ಗ್ರಾಮದವರು. ತಂದೆ ವೆಂಕಟಪ್ಪ, ತಾಯಿ ವೆಂಕಟಗಿರಿಯಮ್ಮ. ಮಂಡ್ಯದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವೀಧರರು. ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಯು.ಆರ್.ಪಿ ವತಿಯಿಂದ (2005) ಎಂ.ಟೆಕ್ ವ್ಯಾಸಂಗ ಪೂರೈಸಿದರು. ಕನ್ನಡ, ತೆಲುಗು, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಬಲ್ಲವರು. ಕರ್ನಾಟಕ ಅಂಬೇಡ್ಕರ್ ಗ್ರಾಮ ಸಮಾಜ ಸಂಘಟನೆಯಿಂದ ಸಮಾಜ ಸೇವೆಯಲ್ಲಿ ನಿರತರು. ಗೋಕಾಕ್ ಚಳವಳಿ, ಬಂಡಾಯ ಸಾಹಿತ್ಯ ಚಳವಳಿ ಹಾಗೂ ದಲಿತ ಚಳವಳಿಯಲ್ಲಿ ಪಾಲ್ಗೊಂಡಿದ್ದರು. 68ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಶೀಲ ವಿಷಯ ಮಂಡನೆ., ಸಮ್ಮೇಳನ, ಉತ್ಸವಗಳು ...
READ MORE