ಕಾಡತಾವ ನೆನಪುಗಳು

Author : ಎಚ್. ಗಿರಿಜಮ್ಮ

Pages 147

₹ 150.00




Year of Publication: 2020
Published by: ಗೀತಾಂಜಲಿ ಪಬ್ಲಿಕೇಷನ್ಸ್
Address: ಬೆಂಗಳೂರು

Synopsys

ಡಾ. ಎಚ್. ಗಿರಿಜಮ್ಮ ಅವರ ಆತ್ಮಕಥನ-ಕಾಡತಾವ ನೆನಪುಗಳು. ಕನ್ನಡ ವೈದ್ಯಸಾಹಿತ್ಯ ಲೋಕಕ್ಕೆ ಮಹತ್ವದ ಕೃತಿಗಳನ್ನು ನೀಡುವ ಮೂಲಕ ಆರೋಗ್ಯ ವಿಶೇಷವಾಗಿ ಮಹಿಳೆಯರ ಆರೋಗ್ಯ ಕುರಿತಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ ಡಾ. ಎಚ್. ಗಿರಿಜಮ್ಮ ಅವರು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡವರು. ರೋಗಿಗಳನ್ನು ಗುಣಮುಖವಾಗಿಸುವಲ್ಲಿ ಜೀವನ ಸಂತೃಪ್ತಿ ಕಂಡವರು. ಮಹಿಳೆಯಾಗಿ ವೈದ್ಯಳಾಗಿ, ಸಮಾಜ ಸೇವಕಿಯ ಮನೋಧರ್ಮದೊಂದಿಗೆ ವೃತ್ತಿಧರ್ಮ ಪಾಲಿಸುವಾಗಿನ ಬವಣೆ-ತೊಂದರೆಗಳು, ಅವರ ಆಶಯಗಳು-ವಿಚಾರಗಳು ಈ ಕೃತಿಯಲ್ಲಿ ಮುಕ್ತವಾಗಿ ಕಟ್ಟಿಕೊಟ್ಟಿದ್ದಾರೆ.

About the Author

ಎಚ್. ಗಿರಿಜಮ್ಮ - 17 August 2021)

ಡಾ. ಎಚ್. ಗಿರಿಜಮ್ಮ- ಹುಟ್ಟಿದ್ದು ದಾವಣಗೆರೆ. ಪಿಯುಸಿವರೆಗೆ ಓದಿದ್ದು ಅಲ್ಲಿಯೇ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ. ಯಶಸ್ವಿ ವೈದ್ಯಳಾಗಬೇಕು ಎನ್ನುವ ಅವರ ತಾಯಿಯ ಆಸೆ ಅವರನ್ನು ವೈದ್ಯಕೀಯ ಅಧ್ಯಯನದಲ್ಲಿ ತೊಡಗಿಕೊಳ್ಳುವಂತೆ ಮಾಡಿತು. ಚಿಕ್ಕ ವಯಸ್ಸಿನಲ್ಲಿ ಕಾದಂಬರಿಗಾರ್ತಿ ತ್ರಿವೇಣಿ ಬರಹದಿಂದ ಪ್ರಭಾವಿತರಾದವರು ಗಿರಿಜಮ್ಮ. ಅವರ ಮೊದಲ ಕತೆ ಹೂಬಳ್ಳಿಗೆ ಈ ಆಸರೆ ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾಯಿತು. ಚಂದಮಾಮ, ತಮಸೋಮ ಜ್ಯೋತಿರ್ಗಮಯ, ಅಂಬರತಾರೆ, ಸೇರಿದಂತೆ ಒಟ್ಟು 27 ಕಾದಂಬರಿಗಳು ಪ್ರಕಟವಾಗಿವೆ. ಅರ್ಧಾಂಗಿ, ಸಂಜೆಮಲ್ಲಿಗೆ, ಅನಾವರಣ, ಅನೇಕ ನೀಳ್ಗತೆಗಳು ಮಯೂರದಲ್ಲಿ ಪ್ರಕಟವಾಗಿವೆ. ಒಟ್ಟು 50 ಕತೆಗಳನ್ನು ಬರೆದಿದ್ದಾರೆ. ಐದು ಕಥಾಸಂಗ್ರಹಗಳು ...

READ MORE

Related Books