ಕಲಿಯುಗದ ಸಂಜೀವಿನಿ ಹೊಕ್ಕಳುಬಳ್ಳಿ

Author : ನಾ. ಸೋಮೇಶ್ವರ

Pages 440

₹ 250.00




Year of Publication: 2015
Published by: ತಾಳುಕಿನ ವೆಂಕಣ್ಯ ಸ್ಮಾರಕ ಗ್ರಂಥಮಲೆ
Address: # 9, ಗೋಕುಲಂ 3 ನೇ ಹಂತ, ಮೈಸೂರು - 570 002

Synopsys

ಬದುಕಿನಲ್ಲಿ ನಮ್ಮ ಮೊದಲ ಆದ್ಯತೆ ಆರೋಗ್ಯ. ಉತ್ತಮ ಆರೋಗ್ಯಕ್ಕೆ ವೈಜ್ಞಾನಿಕವಾಗಿ ಮಾಹಿತಿ, ವೈಚಾರಿಕ ಮಾಹಿತಿಯ ಪುಸ್ತಕಗಳು ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ 30 ಲೇಖನಗಳು ಈ ಕೃತಿಯಲ್ಲಿವೆ. ‘ಕಲಿಯುಗದ ಸಂಜೀವಿನಿ ಹೊಕ್ಕಳುಬಳ್ಳಿ’ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು 2015ನೇ ಸಾಲಿನ ವರ್ಷದ ಅತ್ಯತ್ತಮ ವಿಜ್ಞಾನ ಸಾಹಿತ್ಯ ಕೃತಿ ಎಂದು ಪರಿಗಣಿಸಿ ಬಹುಮಾನವಿತ್ತು ಗೌರವಿಸಿದೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books