ಲೇಖಕ ದೇವುಡು ನರಸಿಂಹ ಶಾಸ್ತ್ರಿಗಳು ಬರೆದ ಕಾದಂಬರಿ-ಕಳ್ಳರ ಕೂಟ. ಜರ್ಮನ್ ಕವಿ ಗೆಯಟೆಯ ‘ಫಾಲೋ ಕಲ್ಪ್ರಿಟ್ಸ್’ ಕಥೆಯನ್ನು ಆಧರಿಸಿದೆ. ಪ್ರತಿಯೊಬ್ಬರೂ ಒಂದಿಲ್ಲೊಂದು ದೋಷ ಉಳ್ಳವರೆ!. ಯಾರೂ ಪರಿಪೂರ್ಣ ಅಲ್ಲ. ಇವರೆಲ್ಲರ ಕೂಟವೇ ಈ ಜಗತ್ತು. ಹೀಗಾಗಿ, ಕಾದಂಬರಿ ಶೀರ್ಷಿಕೆಯನ್ನು ಕಳ್ಳರ ಕೂಟ ಎಂದು ಹೆಸರಿಸಲಾಯಿತು ಎಂದು ಲೇಖಕರು ಹೇಳಿದ್ದಾರೆ. ಇದೇ ಅರ್ಥದ ಜಾಡಿನಲ್ಲಿ ಕಥೆಯು ಸಾಗುತ್ತದೆ.
’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ. 1896ರ ಡಿಸೆಂಬರ್ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...
READ MORE