‘ಮಂಕುತಿಮ್ಮನ ಕಗ್ಗ’ ದಂತಹ ಕೃತಿಯ ಮೂಲಕ ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಹಿರಿಯ ಸಾಹಿತಿ ಡಿ.ವಿ.ಜಿ ಅವರು ಕನ್ನಡ ನಾಡು-ನುಡಿಯ ಸೇವೆಗೈದ ಮಹನೀಯರನ್ನು ಪರಿಚಯಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರೂ ಸೇರಿದ್ದಾರೆ. ಈ ಎಲ್ಲ ಮಹನೀಯರ ಸೇವೆಯು ಭಾರತೀಯ ಸಾಹಿತ್ಯ ಚರಿತ್ರೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಕನ್ನಡ ತಾಯಿ ಭುವನೇಶ್ವರಿಯು ತಲೆ ಎತ್ತಿ ನಿಲ್ಲುವಂತೆ ಮಾಡಿದೆ. ಈ ಕೃತಿಯಲ್ಲಿ ಕನ್ನಡ ನಾಡಿನ ಹೆಸರಾಂತ ಕಲಾವಿದರ ಪರಿಚಯವಿದ್ದು, ಈ ಮೂಲಕ ಕನ್ನಡ ತಾಯಿ ಹಾಗೂ ಸಾಹಿತ್ಯ-ಕಲೆಯ ಔನ್ನತ್ಯವನ್ನು ತೋರುತ್ತದೆ.
ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...
READ MORE