ಜನರ ಗೋಳಿಗೆ ಮಿಡಿಯುತ್ತಲೇ, ಪ್ರಭುತ್ವವನ್ನು ವಿಮರ್ಶಿಸುವ ಲೇಖಕ ಕೆ.ಪಿ.ಸುರೇಶ್ ಅವರು ತಮ್ಮ ಲೇಖನಗಳಲ್ಲಿ ಮಾನವ ಘನತೆಯನ್ನು ಸದಾ ಎತ್ತಿ ಹಿಡಿಯುತ್ತಾರೆ. ಜೀವಪರತೆಗೆ ಧಕ್ಕೆ ಬರದಂತೆ ಸಮಕಾಲೀನ ತಲ್ಲಣಗಳಿಗೆ ಮುಖಾಮುಖಿಯಾಗುವ ಇವರ ಬರೆಹಗಳಲ್ಲಿ, ಸುಗಮವಾಗಿ ಓದಿಸಿಕೊಂಡು ಹೋಗಬಲ್ಲ ವೇಗ ಇದೆ.
ಕೆ.ಪಿ. ಸುರೇಶ್ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಸುಸ್ಥಿರ/ಸಾವಯವ ಕೃಷಿ, ಗಾಂಧೀ ವಿಚಾರಗಳು, ಸಾಹಿತ್ಯ- ವಿಭಿನ್ನ ವಿಷಯಗಳಲ್ಲಿ ಆಸಕ್ತಿಯನ್ನು ಹೊಂದಿರುವ ಇವರು ಈಗಾಗಲೇ ಎರಡು ಕವನ ಸಂಕಲನ, ಎರಡು ಅನುವಾದಿತ ಕೃತಿಗಳನ್ನು ರಚಿಸಿದ್ದಾರೆ. ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಅಭಿವೃದ್ಧಿ, ಇವುಗಳ ಬಗ್ಗೆ ಸತತ ಚಿಂತನೆ ನಡೆಸುವ ಇವರು ತೆರೆಯ ಹಿಂದೆಯೇ 'ಅನಾಮಿಕ'ರಾಗಿ ಇರಲು ಬಯಸುವವರು. ಇವರ ಸಾಹಿತ್ಯ ಕೈಂಕರ್ಯ, ಸಾಹಿತ್ಯಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ...
READ MORE