‘ಕನ್ನಡ ಕಾವ್ಯಮೀಮಾಂಸೆ’ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪ್ರಕಟವಾಗಿರುವ ಕೃತಿ. ಲೇಖಕ ವೀರಣ್ಣ ದಂಡೆ ಅವರು ಈ ಕೃತಿಯನ್ನು ರಚಿಸಿದ್ದಾರೆ. ಕನ್ನಡ ಕಾವ್ಯಲೋಕದ ಕುರಿತಾದ ಮಹತ್ವದ ಲೇಖನಗಳನ್ನು ಇಲ್ಲಿ ಸಂಕಲನ ಗೊಂಡಿವೆ. ಕಾವ್ಯಲೋಕದ ಅನಾವರಣವನ್ನು ಈ ಕೃತಿ ಮಾಡುತ್ತದೆ. ಈ ಕೃತಿಯು ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮರುಬಿಡುಗಡೆಗೊಂಡಿರುತ್ತದೆ.
ಜಾನಪದ ತಜ್ಞ, ಸಂಶೋಧಕ ವೀರಣ್ಣ ದಂಡೆಯವರು ಹುಟ್ಟಿದ್ದು ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಲಗರ ಗ್ರಾಮದಲ್ಲಿ. ತಂದೆ ಶರಣಪ್ಪ ದಂಡೆ, ತಾಯಿ ಬಂಡಮ್ಮ. ಪ್ರಾರಂಭಿಕ ಶಿಕ್ಷಣ ಸಲಗರ. ಬಿ.ಎ, ಎಂ.ಎ. ಪದವಿ ಕಲಬುರ್ಗಿ. “ಕಲಬುರ್ಗಿ ಜಿಲ್ಲೆಯ ಜನಪದ ಕಥೆಗಳ ಆಶಯ ಮತ್ತು ಮಾದರಿಗಳು” ಮಹಾಪ್ರಬಂಧ ಮಂಡಿಸಿ ಕಲಬುರ್ಗಿ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದರು. 1984ರಲ್ಲಿ ಉದ್ಯೋಗಕ್ಕಾಗಿ ಸೇರಿದ್ದು ಬೋಧನಾವೃತ್ತಿ. ಅಧ್ಯಾಪಕರಾಗಿ, ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಣೆ. ಸಹಾಯ ಸಂಶೋಧಕರಾಗಿ ಉತ್ತರ ಕನ್ನಡದ ಏಳು ಜಿಲ್ಲೆಗಳ ಪ್ರವಾಸ. ಜಾನಪದ ವೈದ್ಯಕೋಶ ಸಂಶೋಧನಾ ಯೋಜನೆಯಡಿ ಕ್ಷೇತ್ರ ಸಹಾಯಕರ ಕಾರ್ಯ. ನಾಲ್ಕು ...
READ MORE