ಕನ್ನಡ ಸಾಹಿತ್ಯವು ಭಾರತದ ಯಾವುದೇ ಭಾಷೆಯ ಸಾಹಿತ್ಯಕ್ಕೆ ಹೋಲಿಸಿದರೂ ಅತ್ಯಂತ ಹಳೆಯದು. ಅಂದರೆ ಹಳೆಯದರ ಪೈಕಿ ಮೂರನೇಯದು ಎಂದು ಹೇಳಲಾಗುತ್ತದೆ. (ಮೊದಲು ಸಂಸ್ಕೃತ ಸಾಹಿತ್ಯವಿದೆ).
ಕನ್ನಡ ಸಾಹಿತ್ಯದಲ್ಲಿ ಹಳಗನ್ನಡ, ನಡುಗನ್ನಡ, ವಚನ ಸಾಹಿತ್ಯ, ದಾಸ ಸಾಹಿತ್ಯದಿಂದ ಆಧುನಿಕ ಸಾಹಿತ್ಯದವರೆಗೂ, ಸಾಹಿತ್ಯದ ಆದಿಯಿಂದ ಈವರೆಗೂ ನಡೆದು ಬಂದ ಹಾದಿಯನ್ನು ಹಾಗೂ ಕಂಡು ಬರುವ ಎಲ್ಲ ಸಾಹಿತಿಗಳ ಕುರಿತು ಲೇಖಕರು ಇಲ್ಲಿ ಅಧ್ಯಯನ ಪೂರ್ಣವಾಗಿ ಚರ್ಚೆ ನಡೆಸಿದ್ದಾರೆ.
ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ ಬಿ. ಇಡ್. ಪದವೀಧರರಾಗಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
READ MORE