ಕನ್ನಡದ ಮೂಲಕ ಇಂಗ್ಲಿಷ್

Author : ಬಿ. ಜನಾರ್ದನ ಭಟ್

Pages 186

₹ 120.00




Year of Publication: 2020
Published by: ಸೀತಾ ಬುಕ್ ಸೆಂಟರ್
Address: ಸೀತಾ ಬುಕ್ ಸೆಂಟರ್‌, ಉಡುಪಿ ಪೋನ್ ನಂ - 94811 45775
Phone: 9481145775

Synopsys

ವೃತ್ತಿಯಲ್ಲಿ ಇಂಗ್ಲಿಷ್ ಉಪನ್ಯಾಸಕ ಡಾ. ಬಿ. ಜನಾರ್ದನ ಭಟ್ ಅವರು ಕನ್ನಡ ಮಾಧ್ಯಮದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಕಲಿಕೆಗೆ ಸಹಕಾರಿಯಾಗಲು ‘ಕನ್ನಡದ ಮೂಲಕ ಇಂಗ್ಲಿಷ್  ಎಂಬ ದ್ವಿಭಾಷಾ ವ್ಯಾಕರಣ ಪುಸ್ತಕವನ್ನು ರಚಿಸಿದ್ದಾರೆ. ಈ ಪುಸ್ತಕವು ಜನಪ್ರಿಯತೆ ಗಳಿಸಿದ್ದು, ಬೇಡಿಕೆಯೂ ಹೆಚ್ಚಾಗಿರುವುದರಿಂದ ಪ್ರತಿ ವರ್ಷವೂ ಮರು ಮುದ್ರಣಗೊಳ್ಳುತ್ತಿದೆ. ಆಂಗ್ಲ ಭಾಷೆಯು ಕನ್ನಡದ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗಿರುವುದರಿಂದ ಭಾಷಾಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಈ ಕೃತಿಯು ಸಹಕಾರಿಯಾಗಿದೆ.

About the Author

ಬಿ. ಜನಾರ್ದನ ಭಟ್

ಸಾಹಿತಿ ಡಾ. ಬಿ.ಜನಾರ್ದನ ಭಟ್ ಅವರದು ಬಹುಮುಖ ಪ್ರತಿಭೆ. ಅವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ವಿಮರ್ಶಕರಾಗಿ, ಅಂಕಣಕಾರರಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ ಸಾಹಿತ್ಯಾನುಸಂಧಾನ ಬಹುಸೂಕ್ಷ್ಮವಾದುದು. ಬಹುಭಾಷಿಕ, ಬಹುಶ್ರುತ ವಿದ್ವಾಂಸರೂ ಸೃಜನಶೀಲ ಲೇಖಕರೂ ಆಗಿರುವ ಭಟ್ ಅವರದು ಸ್ಪೋಪಜ್ಞತೆಯ ಹಾದಿ. ತಮ್ಮ ಕೃತಿಗಳಲ್ಲಿ ಹೆಚ್ಚಿನ ಸ್ವಂತಿಕೆಯ ಛಾಪನ್ನು ಒತ್ತುತ್ತಾ ಬಂದಿರುವ ಡಾ. ಜನಾರ್ದನ ಭಟ್ ಅವರು ಸಮಕಾಲೀನ ಕನ್ನಡದ ಹೆಸರಾಂತ ಲೇಖಕರಲ್ಲಿ ಒಬ್ಬರು. ಭಟ್ ಅವರ ಹೆಚ್ಚಿನ ಕೃತಿಗಳು ಆಳ ಮತ್ತು ಸಂಕೀರ್ಣತೆಯನ್ನು ಹೊಂದಿರುವುದು ವಿಶೇಷ. ವಿದ್ವತ್ತು ಮತ್ತು ಸೃಜನಶೀಲತೆ ಎರಡನ್ನೂ ಮೈಗೂಡಿಸಿಕೊಂಡಿರುವ ಬೆಳ್ಮಣ ನ ಡಾ. ಬಿ.ಜನಾರ್ದನ ...

READ MORE

Related Books