ಕನ್ನಡ ಪದಗಳ ತಯಾರಿಕೆಯಲ್ಲಿ ಎಂತಹ ನಿಯಮಗಳೆಲ್ಲ ಬಳಕೆಯಲ್ಲಿವೆ, ಹೇಗೆ ಕನ್ನಡದಲ್ಲಿ ಪದಗಳಿಗೆ ಪ್ರತ್ಯಯಗಳನ್ನು ಸೇರಿಸಿ ಬೇರೆ ಪದಗಳನ್ನು ಉಂಟುಮಾಡಲಾಗುತ್ತದೆ ಎಂಬುದನ್ನು ಈ ಪುಸ್ತಕದಲ್ಲಿ ತೋರಿಸಿಕೊಡಲಾಗಿದೆ. ಇದರಿಂದಾಗಿ, ಕನ್ನಡ ಪದಗಳ ಒಳರಚನೆ ಈ ಪುಸ್ತಕದಲ್ಲಿ ಹೆಚ್ಚು ಸ್ಪಷ್ಟವಾಗಿ ಮೂಡಿಬಂದಿದೆ. ಸಂಸ್ಕೃತದಿಂದ ಕನ್ನಡಕ್ಕೆ ಎರವಲಾಗಿ ಬಂದಿರುವ ಪದಗಳಿಗೂ ಕನ್ನಡದಲ್ಲಿ ಕನ್ನಡದ್ದೇ ಆದ ಒಳರಚನೆಯಿದೆ. ಹಾಗಾಗಿ ಅವನ್ನು ವರ್ಣಿಸುವಾಗಲೂ ಸಂಸ್ಕೃತದ ವ್ಯಾಕರಣ ನಿಯಮಗಳನ್ನು ಹಾಗೆಯೇ ಬಳಸಿಕೊಳ್ಳುವುದು ಸರಿಯಲ್ಲ ಎಂಬುದನ್ನು ಪುಸ್ತಕದಲ್ಲಿ ವಿವರಿಸಲಾಗಿದೆ.
©2024 Book Brahma Private Limited.