ಸ್ವಾತಂತ್ರ್ಯ ಹೋರಾಟಗಾರರೂ, ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನಸಭೆಗಳ ಮಾಜಿ ಸದಸ್ಯರೂ, ಬರಹಗಾರರೂ ಆದ ಶ್ರೀ ಬಿ.ವಿ. ಕಕ್ಕಿಲ್ಲಾಯರ ಅವರ ’ಕಾರ್ಲ್ ಮಾರ್ಕ್ಸ್ ಬದುಕು ಬರಹ ’ ಪುಸ್ತಕವು 1985 ರಲ್ಲಿ ಪ್ರಥಮ ಮುದ್ರಣ ಕಂಡಿತ್ತು. ಎರಡನೇ ಮುದ್ರಣ 2019 ರಲ್ಲಿ ಮೂಡಿ ಬಂದಿದೆ. ಈ ಕೃತಿಯು ಸೋವಿಯತ್ ಲ್ಯಾಂಡ್ ನೆಹರೂ ಪುರಸ್ಕಾರವನ್ನು ಪಡೆದಿದೆ.
ಕಾರ್ಲ್ ಮಾಕ್ಸ್ ಬದುಕು ಬರಹ ಕೃತಿಯಲ್ಲಿರುವುದು ಒಬ್ಬ ವ್ಯಕ್ತಿಯ ಬದುಕಿನ ವಿವರಣೆಗಿಂತ ಹೆಚ್ಚಾಗಿ ಭಾರತದ ಕಳೆದ ಏಳು ದಶಕಗಳ ಏಳುಬೀಳುಗಳ ನಿರೂಪಣೆ. 1983ರಲ್ಲಿ ವಿಟ್ಲ ವಿಧಾಸಭೆಯ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಬರವಣಿಯತ್ತ ಗಮನ ಹರಿಸಿದ ಕಕ್ಕಿಲ್ಲಾಯರು, ಕಾರ್ಲ್ ಮಾರ್ಕ್ಸ್ ಬದುಕು ಬರಹದ ರಚನೆಯ ಮೂಲಕ ಸಮಕಾಲೀನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ತಮ್ಮ ಲೇಖನಗಳ ಮೂಲಕ ಪತ್ರಿಕೆಗಳಲ್ಲಿ ತಮ್ಮ ಅಭಿಪ್ರಾಯ ಪ್ರಕಟಿಸಿದ್ದರು.
ಬಿ.ವಿ. ಕಕ್ಕಿಲ್ಲಾಯರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣ ಚಳುವಳಿಯ ನಾಯಕರು, ಭಾರತ ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರು, ಪ್ರಶಸ್ತಿ ವಿಜೇತ ಲೇಖಕರು ಹಾಗೂ ಚಿಂತಕರು. ಉತ್ತರ ಕೇರಳದ ಕಾಸರಗೋಡು ತಾಲೂಕಿನ ಚೆರ್ಕಳದ ಸಮೀಪ, ಪಯಸ್ವಿನಿ ನದಿಯ ದಂಡೆಯ ಮೇಲಿರುವ ಬೇವಿಂಜೆಯಲ್ಲಿ ಶ್ರೀಮಂತ ಭೂಮಾಲಕರಾಗಿದ್ದ ವಿಷ್ಣು ಕಕ್ಕಿಲ್ಲಾಯರ ಕೊನೆಯ ಮಗನಾಗಿ ಏಪ್ರಿಲ್ 9, 1919 ರಂದು ಬಿ. ವಿ ಕಕ್ಕಿಲ್ಲಾಯ ಜನಿಸಿದರು. ಕಾಸರಗೋಡಿನಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಬಳಿಕ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜನ್ನು ಸೇರಿದ ಬಿ ವಿ ಕಕ್ಕಿಲ್ಲಾಯರು ಆ ಕಾಲದಲ್ಲಿ ಉತ್ತುಂಗದಲ್ಲಿದ್ದ ಭಾರತದ ಸ್ವಾತಂತ್ರ್ಯ ...
READ MOREಸೋವಿಯತ್ ಲ್ಯಾಂಡ್ ನೆಹರೂ ಪುರಸ್ಕಾರ