ಕರ್ನಾಟಕ ಇತಿಹಾಸದ ಆಕರಗಳು (ಸಂಪುಟ-1)

Author : ಎಚ್.ಎಸ್. ಗೋಪಾಲರಾವ್

Pages 324

₹ 450.00




Year of Publication: 2020
Published by: ದಿವ್ಯ ಪ್ರಕಾಶನ
Address: # 5/1, ನಾಗಪ್ಪ ಬೀದಿ, ಶೇಷಾದ್ರಿಪುರ, ಬೆಂಗಳೂರು-560020

Synopsys

ಕರ್ನಾಟಕ ಇತಿಹಾಸಕ್ಕೆ ಸಂಬಂಧಿಸಿದ ಬಹುತೇಕ ಎಲ್ಲ ಆಕರಗಳನ್ನುಒಟ್ಟುಗೂಡಿಸಿ ನೀಡಿರುವ ಹಿರಿಯ ಲೇಖಕ-ಇತಿಹಾಸ ತಜ್ಞ ಡಾ. ಎಸ್. ಶ್ರೀಕಂಠಶಾಸ್ತ್ರೀ ಅವರ ಕೃತಿಯನ್ನು ಲೇಖಕ ಡಾ. ಎಚ್.ಎಸ್. ಗೋಪಾಲರಾವ್ ಅವರು ಲಿಪ್ಯಂತರ ಹಾಗೂ ಕನ್ನಡಕ್ಕೆ ಅನುವಾದಿಸಿದ್ದಾರೆ. ಖ್ಯಾತ ಇತಿಹಾಸ ತಜ್ಞ ಡಾ. ಆರ್.ಸಿ.ಮಂಜುದಾರ ಅವರು ಕೃತಿಯ ಕುರಿತು ‘ಈ ಕೃತಿಯು ಕರ್ನಾಟಕ ಇತಿಹಾಸದ ವಿದ್ಯಾರ್ಥಿಗಳಿಗೆ, ಬೋಧಕರಿಗೆ ಉಪಯುಕ್ತವಾಗಿದೆ. ಸಂಶೋಧನೆಗೂ ಅವಕಾಶ ಕಲ್ಪಿಸುತ್ತದೆ. ಸಂಗ್ರಹಿಸಿದ ಉಲ್ಲೇಖನಗಳನ್ನು ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿದ್ದು, ವಿಮರ್ಶಾತ್ಮಕವಾಗಿ ವಿಶ್ಲೇಷಿಸಲಾಗಿದೆ’ ಎಂದು ಪ್ರಶಂಸಿಸಿದ್ದಾರೆ.

 

About the Author

ಎಚ್.ಎಸ್. ಗೋಪಾಲರಾವ್
(18 November 1946)

ಡಾ. ಎಚ್.ಎಸ್. ಗೋಪಾಲರಾವ್  ಅವರು 1946ರ ನವೆಂಬರ್‌ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು.  ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ.  ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ.  ಜೇನು ನಂಜು, ...

READ MORE

Related Books