ಡಾ. ಟಿ.ಎಂ.ಎ ಪೈ ಭಾರತೀಯ ಸಾಹಿತ್ಯ ಲೋಕ ಮಾಲಿಕೆಯಡಿ ಲೇಖಕ ಟಿ.ಪಿ. ಅಶೋಕ ಅವರು ಬರೆದ ಕಥನ ಭಾರತಿ ಕೃತಿ ಪ್ರಕಟಿಸಿದ್ದು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಭಾರತದ ವಿವಿಧ ಭಾಷೆಯ ಲೇಖಕರ ಪ್ರಮುಖ ಲೇಖನಗಳನ್ನು ವಿಮರ್ಶೆಗೆ ಒಳಪಡಿಸಿದ್ದು, ಒಂದು ಉತ್ತಮ ವಿಮರ್ಶೆ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
1857ರ ಸ್ವಾತಂತ್ಯ್ರ ಸಂಗ್ರಾಮದ ದಿನಗಳಿಂದ ಇವತ್ತಿನವರೆಗೆ ಈ ಅವಧಿಯಲ್ಲಿ ಸಾಗಿ ಬಂದ ಸಾಹಿತ್ಯದ ವಿವಿಧ ಮಜಲುಗಳನ್ನುವಿಶ್ಲೇಷಿಸುವ ಪ್ರಯತ್ನ ಇಲ್ಲಿದೆ. ವಸಾಹತುಶಾಹಿ, ದೇಶದ ವಿಭಜನೆ, ಸ್ವಾತಂತ್ಯ್ರಾನಂತರದ ಭಾರತ ಸಾಹಿತ್ಯದ ನಡೆದು ಬಂದ ದಾರಿಯನ್ನುಸಾಮಾಜಿಕ, ರಾಜಕೀಯ ಹೀಗೆ ಎಲ್ಲ ವಲಯಗಳ ಹಿನ್ನೆಲೆಯಲ್ಲಿ ವಿಶ್ಲೇಷಿಸಲಾಗಿದೆ.
ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...
READ MOREಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2017)