ಲೇಖಕ ಟಿ.ಪಿ. ಅಶೋಕ ಅವರ ಕೃತಿ-ಕಥನ ವೈವಿಧ್ಯ. 14 ಭಾರತೀಯ ವಿವಿಧ ಭಾಷೆಗಳ ಸಾಹಿತ್ಯ ಕೃತಿಗಳ ವಿಶ್ಲೇಷಣಾ ಲೇಖನಗಳು ಈ ಕೃತಿಯಲ್ಲಿವೆ. ರವೀಂದ್ರನಾಥ ಠಾಕೂರರ ‘ಮೂರು ಕತೆಗಳು’, ರುಕಿಯಾ ಶೇಖಾವತ್ ಹುಸೇನ್ ಅವರ ‘ಸುಲ್ತಾನಳ ಕನಸು’, ‘ಪ್ರೇಮಚಂದ್ರರ ಕತೆಗಳು’ ಹಾಗೂ ಕತೆ, ಕಾದಂಬರಿಗಳ ಸಾಮಾನ್ಯ ವಿವರಣೆ ಮತ್ತು ಕೃತಿ ಮುಖೇನ ವಿಶ್ಲೇಷಣೆಯನ್ನು ಇಲ್ಲಿ ಕಾಣಬಹುದು.
ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...
READ MORE