`ಕವನಗಳು, ಹಾಸ್ಯ ಲೇಖನ, ಕತೆಗಳು, ನಾಟಕಗಳು’ ಕೃತಿಯು ಎಲ್.ಆರ್. ಹೆಗಡೆ ಅವರ ಅಪ್ರಕಟಿತ ಬರಹಗಳ ಸಂಕಲನ. ಈ ಕೃತಿಯನ್ನು ರೇಣುಕಾ ರಾಮಕೃಷ್ಣ ಭಟ್ಟ ಅವರು ಸಂಪಾದಿಸಿದ್ದಾರೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ; ಅರೆಜಾನಪದ ಶೈಲಿಯಲ್ಲಿ ಕವನಗಳನ್ನು ಬರೆದು ‘ಗ್ರಾಮಜೀವನ’ ಮಾಸಪತ್ರಿಕೆಗೆ ಕೊಡುತ್ತಿದ್ದರು. ಅದು ‘ಬಾಳ ದೀಪಾವಳಿ’ ಎಂಬ ಹೆಸರಿನಿಂದ ಗ್ರಂಥವಾಯಿತು. ಕಾಲೇಜು ಜೀವನದಲ್ಲಿ ಬರೆದ ಅನೇಕ ಕವಿತೆಗಳು ಬಹಳಷ್ಟು ಪ್ರಸಿದ್ದಿಯನ್ನು ಪಡೆದು ನಂತರದಲ್ಲಿ ಕೃತಿಯ ರೂಪವನ್ನು ಪಡೆಯಿತು. ‘ಹಕ್ಕಿ ನರಸಣ್ಣ’ ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಅವರ ಮೊದಲ ಕಥೆಗಳು ಪ್ರಕಟಗೊಂಡವು. ಕಾಲೇಜಿಗೆ ಹೋಗುವಾಗ ಅನೇಕ ಸಾಮಾಜಿಕ ನಾಟಕಗಳನ್ನು ರಚಿಸಿ, ತಾವೇ ದಿಗ್ದರ್ಶಿಸಿ, ಪ್ರಮುಖ ಪಾತ್ರಗಳನ್ನು ನಿರ್ವಹಿಸಿ ಎಲ್ಲ ಹೊಗಳಿಕೆಗೆ ಪಾತ್ರರಾಗಿದ್ದರು. ಹೀಗೆ ಅನೇಕ ವಿಚಾರಗಳನ್ನು ಈ ಕೃತಿಯು ಕಟ್ಟಿಕೊಡುತ್ತದೆ.
ಜಾನಪದ ಭೀಷ್ಮ ಹಾಗೂ, ನಡೆದಾಡುವ ಜಾನಪದ ವಿಶ್ವಕೋಶ ಎಂದೇ ಖ್ಯಾತಿಯ ಡಾ.ಎಲ್.ಆರ್. ಹೆಗಡೆ ಅವರು ಜನಿಸಿದ್ದು1923ರಲ್ಲಿ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಹೊಲನಗದ್ದೆ ಅವರ ಹುಟ್ಟೂರು. ತಂದೆ ರಾಮಕೃಷ್ಣ ಹೆಗಡೆ, ತಾಯಿ ಮಹಾಲಕ್ಷ್ಮಿ. ಹೊಲನಗದ್ದೆಯಲ್ಲಿ ಪ್ರಾಥಮಿಕ ಶಿಕ್ಷಣ, ಗುಡೆ ಅಂಗಡಿಗಳಲ್ಲಿ ಹಾಗೂ ಕುಮಟಾದ ಗಿಬ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ, ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪಡೆದರು. 1946ರಲ್ಲಿ , ಮುಂಬಯಿ ವಿಶ್ವ ವಿದ್ಯಾಲಯದಿಂದ ಬಿ.ಎ. ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರು. 1949ರಲ್ಲಿ ಬಿ.ಟಿ.ಪರೀಕ್ಷೆ ಉತ್ತೀರ್ಣರಾದರು ಹಾಗೂ 1950ರಲ್ಲಿ ಪುಣೆ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ...
READ MORE