ಆಧುನಿಕತೆಗೆ ಮಾರು ಹೋದ ಜನರು, ಹಳ್ಳಿಗಳಲ್ಲಾದ ಪಲ್ಲಟಗಳು, ಅದರ ಪರಿಣಾಮವಾಗಿ ಇಡೀ ಸಮಾಜದ ಜಾಗತೀಕರಣದೆಡೆಗೆ ಹೊರಳಿರುವ ಬಗೆಯನ್ನು ಲೇಖಕರು ತಮ್ಮ ಕಥೆಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಅಪ್ಪಟ್ಟ ಹಳ್ಳಿ ಸೊಗಡಿನ ಇವರ ಬರಹಗಳು ಲೇಖಕರ ಸರಳ ಭಾಷಾ ಶೈಲಿಯನ್ನು ಅನಾವರಣಗೊಳಿಸುತ್ತಿವೆ.
ಲೇಖಕ ಶರಣಗೌಡ ಪಾಟೀಲ ಅವರು ಕಲಬುರಗಿ ಜಿಲ್ಲೆಯ ತಿಳಗೂಳ ಗ್ರಾಮದವರು. ಸ್ನಾತಕೋತ್ತರ ಪದವೀಧರರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃತಿಗಳು: ಹಿಟ್ಟಿನ ಗಿರಣಿ ಕಿಟ್ಟಪ್ಪ (ಲಲಿತ ಪ್ರಬಂಧಗಳ ಸಂಕಲನ)’, ತೊರೆದ ’ಗೂಡು (ಕಾದಂಬರಿ), ಕೆಂಪು ಶಲ್ಯ ಫಕೀರೂ ಹಾಗೂ ಇತರ ಕಥೆಗಳು (ಕಥಾ ಸಂಕಲನ), ಕಾಳು ಕಟ್ಟದ ಕಣ್ಣೀರು, ಭೀಮಾ ತೀರದ ತಂಗಾಳಿ (ಕಾದಂಬರಿಗಳು) ಪ್ರಶಸ್ತಿ-ಪುರಸ್ಕಾರಗಳು: ಇವರ ‘ಹಿಟ್ಟಿನ ಗಿರಣಿ ಕಿಟ್ಟಪ್ಪ ಕೃತಿಗೆ 2017-18 ನೇ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಡಿ ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ. ಶಿಕ್ಷಕರ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ...
READ MOREಸಂಪೂರ್ಣ ಗ್ರಾಮೀಣ ವಿಷಯ ವಸ್ತು ಆಧಾರವಾಗಿಟ್ಟುಕೊಂಡು ಕಥೆ ಹೆಣೆಯಲಾಗಿದೆ