ಕೆನ್ನೀಲಿ

Author : ಎಂ.ಆರ್. ಕಮಲ

Pages 224

₹ 220.00




Year of Publication: 2022
Published by: ಕಥನ ಪ್ರಕಾಶನ
Address: ನಂ.15,ಕಥನ, 7ನೆ ‘ಬಿ’ ಅಡ್ಡರಸ್ತೆ, ಗಾರ್ಡನ್ ವಿಲ್ಲಾಸ್, ನಾಗರಬಾವಿ,ಬೆಂಗಳೂರು-560 072
Phone: 9448334622

Synopsys

ಲೇಖಕಿ, ಅನುವಾದಕಿ ಎಂ.ಆರ್. ಕಮಲಾ ಅವರ ಅನುವಾದಿತ ಕೃತಿ ಕೆನ್ನೀಲಿ. ಆಧುನಿಕ ಆಫ್ರಿಕನ್ - ಅಮೆರಿಕನ್ ಸಾಹಿತ್ಯಕ್ಕೆ ಹೊಸ ಸಂವೇದನೆ, ಹೊಸ ನೋಟ ನೀಡಿದ ಅಲೀಸ್ ವಾಕರ್ ಅವರ ಪ್ರಬಂಧ, ಉಪನ್ಯಾಸ, ಲೇಖನಗಳು 'ಕೆನ್ನೀಲಿ' ಬಣ್ಣದ ಮೂಲಕ ಕನ್ನಡಕ್ಕೆ ಅಡಿಯಿಟ್ಟಿದೆ. ಕೃತಿಯ ಕರ್ತೃವಿನ ಮಾತಿನಂತೆ `ನಾನು ಬರೆಯುವ ಅಥವಾ ನಾವೆಲ್ಲಾ ಬರೆಯುವ ಕತೆಗಳು ನನ್ನ, ನಮ್ಮ ಅವ್ವನ ಕತೆಗಳೇ; ಎಂಬ ಅಲೀಸ್ ವಾಕರ್ ಮಾತು ಅವಳೇ ಹೇಳುವಂತೆ ನನಗೂ ಅರ್ಥವಾಗಿದ್ದು ಕೊಂಚ ತಡವಾಗಿಯೇ. ಇದರ ಜೊತೆಗೆ ಇವು ಜಗತ್ತಿನ ಎಲ್ಲ ಹೆಣ್ಣುಮಕ್ಕಳ ಕತೆಗಳು ಎನಿಸಿದ್ದರಿಂದಲೇ ಈ ಪುಸ್ತಕವನ್ನು ಅನುವಾದಿಸಬೇಕೆನ್ನಿಸಿತು. ಈ ಪುಸ್ತಕಕ್ಕೆ ಇನ್ನೂ ಹಲವಾರು ಆಯಾಮಗಳಿದ್ದರೂ, ವೈವಿಧ್ಯಮಯ ವಿಷಯಗಳಿದ್ದರೂ ಅದು ಪ್ರಧಾನವಾಗಿ ಬದುಕನ್ನು ಹಸನಾಗಿಸಲು ಹೆಣ್ಣುಮಕ್ಕಳು ನಡೆಸಿದ ಹೋರಾಟದ ಕತೆಗಳನ್ನೇ ಹೇಳುತ್ತದೆ. ಹೆಚ್ಚು ಕಮ್ಮಿ ಐನೂರು ಪುಟಗಳಿರುವ ಪುಸ್ತಕದ ಕೆಲವು ಭಾಗಗಳನ್ನು ಮಾತ್ರ ಅನುವಾದಿಸಿದ್ದೇನೆ ಎಂದಿದ್ದಾರೆ.

About the Author

ಎಂ.ಆರ್. ಕಮಲ
(27 March 1959)

ಕವಿ-ಅನುವಾದಕಿಯಾಗಿ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಎಂ.ಆರ್. ಕಮಲಾ ಅವರು ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಮೇಟಿಕುರ್ಕೆಯವರು. 1959ರ ಮಾರ್ಚ್‌ 27ರಂದು ಜನಿಸಿದರು. ತಂದೆ ಎಂ.ಎಚ್. ರಾಮಸ್ವಾಮಿ, ತಾಯಿ ವಿಶಾಲಾಕ್ಷಿ. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಮತ್ತು ಎಲ್.ಎಲ್.ಬಿ. ಪದವಿ, ಸ್ನಾತಕೋತ್ತರ ಪರೀಕ್ಷೆಯಲ್ಲಿ ಪಾಶ್ಚಿಮಾತ್ಯ ಸಾಹಿತ್ಯ ಅಧ್ಯಯನಕ್ಕಾಗಿ ಬಿಎಂಶ್ರೀ ಚಿನ್ನದ ಪದಕ ವಿಜೇತರು.  ಫ್ರೆಂಚ್ ಭಾಷೆಯಲ್ಲಿ ಪದವೀಧರರು. ಶಕುಂತಲೋಪಾಖ್ಯಾನ (1988), ಜಾಣೆ ಮತ್ತು ಇತರ ಕವಿತೆಗಳು (1992), ಹೂವು ಚೆಲ್ಲಿದ ಹಾದಿ (2007), ಮಾರಿಬಿಡಿ (2017) ಕವನ ಸಂಕಲನಗಳು. ಆಫ್ರಿಕನ್-ಅಮೆರಿಕನ್ ಮತ್ತು ಅರಬ್ ಮಹಿಳಾ ಕಾವ್ಯದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. ’ಕತ್ತಲ ಹೂವಿನ ಹಾಡು (1989) ...

READ MORE

Related Books