‘ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಮತ್ತು ಇತರ ಕತೆಗಳು’ ಕೃತಿಯು ಖ್ಯಾತ ಲೇಖಕ-ಪತ್ರಕರ್ತ ಪಿ.ಲಂಕೇಶ ಅವರ ಕತಾ ಸಂಕಲನವಾಗಿದೆ. ಇಲ್ಲಿ ಲೇಖಕರು ವಿಚಾರಗಳನ್ನು ಪ್ರಸ್ತುತಪಡಿಸುತ್ತಾ ಜೀವನದ ಮೌಲ್ಯಗಳನ್ನು ತಿಳಿಸಿಕೊಡುತ್ತಾರೆ. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎನ್ನುವುದು ಗಾದೆ ಮಾತಾಗಿದ್ದು, ಲೇಖಕರು ತಮ್ಮ ಬರವಣಿಗೆಯಲ್ಲಿ ಆ ವಾಕ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿದ್ದಾರೆ. ಇಲ್ಲಿರುವ ಕತೆಗಳು ಪ್ರತಿಯೊಬ್ಬರ ಬದುಕಿನಲ್ಲಿ ನಡೆಯುವಂತಹ ವಿಚಾರಗಳಿಗೆ ಅವಲಂಬಿತವಾಗಿರುವುದ್ನು ಕಾಣಬಹುದು.
ಪಿ. ಲಂಕೇಶ್ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿವೆ. ಕವಿ, ಕಥೆಗಾರ, ಕಾದಂಬರಿಕಾರ, ಅನುವಾದಕ, ನಾಟಕಕಾರ, ನಟ, ಚಲನಚಿತ್ರ ನಿರ್ದೇಶಕ, ಸಂಪಾದಕ, ಕೃಷಿಕ ಹೀಗೆ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೊನಗವಳ್ಳಿ 1935ರ ಮಾರ್ಚ್ 8ರಂದು ಜನಿಸಿದರು., ತಂದೆ ನಂದಿ ಬಸಪ್ಪ, ತಾಯಿ ದೇವೀರಮ್ಮ. ಕೊನಗವಳ್ಳಿ ಮತ್ತು ಹಾರನಹಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿದ ಅವರು ಪ್ರೌಢಶಾಲೆ ಮತ್ತು ಇಂಟರ್ ...
READ MORE