‘ಕೊಡವರು’ ಪಿ.ಎಸ್. ರಾಮಾನುಜಂ ಅವರ ಸಂಶೋದನಾ ಕೃತಿ. ಅವರು ಕೊಡಗಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಕೊಡವರ ಆಚಾರ ಪದ್ದತಿಗಳ ,ಹಬ್ಬ ಹರಿದಿನಗಳ ಮತ್ತು ವೇಷಭೂಷಣಗಳ ವೈಶಿಷ್ಠ್ಯವನ್ನು ಕಂಡು ಕುತೂಹಲಗೊಂಡು, ಆ ಜನಾಂಗದ ಮೂಲವನ್ನು ಕಂಡುಹಿಡಿಯುವ ಪ್ರಯತ್ನದಲ್ಲಿ ತೊಡಗಿದರು. ಕೊಡವರ ಬಗ್ಗೆ ಪ್ರಕಟವಾಗಿದ್ದ ಹಲವು ಗ್ರಂಥಗಳನ್ನು ಓದಿ, ಅಲ್ಲಿನ ಹಬ್ಬ ಹರಿದಿನಗಳಲ್ಲಿ ಪಾಲ್ಗೊಂಡು, ಅವರ ಜೀವನ ಕ್ರಮವನ್ನು ಅಧ್ಯಯನ ಮಾಡಿದ್ದರ ಫಲವೇ ಈ ಕೃತಿ.
,
ಪಿ.ಎಸ್. ರಾಮಾನುಜಂ ಕರ್ನಾಟಕ ರಾಜ್ಯ ಪೊಲಿಸ್ ಇಲಾಖೆಯಲ್ಲಿ IPS ಅಧಿಕಾರಿಗಳಾಗಿದ್ದು ಎಡಿಶನಲ್ ಡೈರೆಕ್ಟರ್ ಜನರಲ್ ಆಫ್ ಪೊಲಿಸ್ (ADGP) ಆಗಿ ಕಾರ್ಯನಿರ್ವಹಿಸಿ 2001ರಲ್ಲಿ ನಿವೃತ್ತರಾದರು. ಸಾಹಿತ್ಯ, ಆಡಳಿತ ಎರಡನ್ನೂ ಸಮರ್ಥವಾಗಿ ನಿರ್ವಹಿಸಿದ ಅವರ ಹುಟ್ಟೂರು ಚಾಮರಾಜನಗರ ಜಿಲ್ಲೆಯ ಬೇಡಮೂಡಲು ಗ್ರಾಮ. ತಂದೆ ಪ್ರತಿವಾದಿ ಭಯಂಕರ ಎಂದೇ ಬಿರುದಾಂಕಿತರಾಗಿದ್ದ ಸಂಪತ್ ಕುಮಾರ ಆಚಾರ್ಯ, ತಾಯಿ ಇಂದಿರಮ್ಮ. ಆರಂಭಿಕ ಶಿಕ್ಷಣ ಹರದನಹಳ್ಳಿ, ಚಾಮರಾಜನಗರದಲ್ಲಿ ಪೂರ್ಣಗೊಳಿಸಿದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ(ಆನರ್ಸ್) ಪದವಿ ಪಡೆದರು,ಆನಂತರ ಕನ್ನಡ ಪಂಡಿತ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್, ಎಂ.ಎ ಪ್ರಥಮ ರ್ಯಾಂಕ್ ಸೇರಿದಂತೆ ಐದು ಚಿನ್ನದ ...
READ MORE