ಗಾಂಧಿಯುಗದಲ್ಲಿ ಕನ್ನಡ ನಾಡು ಕಂಡ ಅಪೂರ್ವ ಮುತ್ಸದ್ದಿಗಳಲ್ಲಿ ಕೆ.ಆರ್ ಕಾರಂತರು ಪ್ರಮುಖರು. ಇವರು ಕೆ.ಆರ್ ಕಾರಂತ ಎಂದೇ ಖ್ಯಾತರಾದವರು. ರಾಜಕೀಯ, ಸಾಮಾಜಿಕ ಸೇವೆ, ಕರ್ನಾಟಕ ಏಕೀಕರಣ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದ ಕೋಟಾ ರಾಮಕೃಷ್ಣ ಕಾರಂತರು ವಿಶಾಲ ಕರ್ನಾಟಕದ ರಚನೆಗಾಗಿ ಕೇಂದ್ರ ನಾಯಕರಿಗೆ, ಪ್ರಧಾನಿಗಳಿಗೆ ಒತ್ತಡ ತರುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಇವರ ಬದುಕನ್ನು, ಜೀವನ ಸಾಧನೆಯ ವಿವರಗಳನ್ನು ಡಾ. ವಸಂತಕುಮಾರ ಪೇರ್ಲ ರವರು ಈ ಕೃತಿಯಲ್ಲಿ ಒದಗಿಸಿದ್ದಾರೆ.
ಯಕ್ಷಗಾನ, ಸಾಹಿತ್ಯ, ಶಿಕ್ಷಣ, ಧಾರ್ಮಿಕ, ವೈದಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಹೆಸರುಗಳಿಸಿರುವ ಲೇಖಕ ವಸಂತಕುಮಾರ ಪೆರ್ಲ. ಅವರು ಕಾಸರಗೋಡಿನ ಪುಟ್ಟ ಊರಾದ ಪೆರ್ಲದಲ್ಲಿ 1958ರ ಜುಲೈ 2ರಂದು ಜನಿಸಿದರು. ಈ ಪೆರ್ಲ ಭರಿನ ಹೆಸರಿಗೆ ಕೀರ್ತಿ ತಂದವರಲ್ಲಿ ವಸಂತಕುಮಾರ್ ಒಬ್ಬರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಳತ್ಕ್ತಡ್ಕ ಶಾಲೆಯಲ್ಲಿ ಮತ್ತು ಪ್ರೌಢಶಿಕ್ಷಣವನ್ನು ಪೆರ್ಲ ಸತ್ಯನಾರಾಯಣ ಹೈಸ್ಕೂಲಿನಲ್ಲಿ ಪೂರೈಸಿದರು. ಪದವಿ, ಉನ್ನತ ಪದವಿಯನ್ನು ಮತ್ತು ರಂಗಭೂಮಿ ವಿಷಯದಲ್ಲಿ ಡಾಕ್ಟರೇಟ್. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆೆ. ಹೈಸ್ಕೂಲ್ ವಿದ್ಯಾಭ್ಯಾಸದ ಕಾಲದಲ್ಲೇ ಕಥೆಗಳನ್ನು ಬರೆಯ ತೊಡಗಿದ ಅವರು ಬೆಂಗಳೂರಿನ ಪ್ರಜಾಪ್ರಭುತ್ವ ವಾರಪತ್ರಿಕೆಯಲ್ಲಿ ಉಪಸಂಪಾದಕ-ವರದಿಗಾರರಾಗಿ ಔದ್ಯೋಗಿಕ ...
READ MORE