ಕ್ರಾಂತಿಯಲ್ಲ, ಭ್ರಾಂತಿ ! ಲೇಖನ ಬರಹಗಳ ಪುಸ್ತಕವನ್ನು ಲೇಖಕ ಹೊ.ವೆ. ಶೇಷಾದ್ರಿ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಈಗ ಜಗತ್ತಿನೆಲ್ಲೆಡೆ ಕಮ್ಯೂನಿಸಂ ಕುಸಿಯತೊಡಗಿರುವ ಸಂಗತಿ, ಕಮ್ಯೂನಿಸ್ಟ್ ಕ್ರಾಂತಿ ಅದೊಂದು ಭ್ರಾಂತಿ ಎನ್ನುವುದನ್ನು ಸಾಬೀತುಪಡಿಸಿದೆ. ಖ್ಯಾತ ಚಿಂತಕ, ಹೊ.ವೆ. ಶೇಷಾದ್ರಿ ಅವರು ಕಮ್ಯೂನಿಸ್ಟ್ ಚಟುವಟಿಕೆಗಳನ್ನು ಕಣ್ಣಲ್ಲಿ ಕಣ್ಣಿಟ್ಟು ಅಳೆದು ತೂಗಿರುವ ಲೇಖನಗಳನ್ನು ಈ ಕೃತಿಯಲ್ಲಿ ಕಾಣಬಹುದು. ಭಾರತದಲ್ಲಿ ಕಮ್ಯುನಿಷ್ಟ್ ಬೆಳೆದ ಬಗೆ, ಜಗತ್ತಿನಲ್ಲಿ ಅದು ಹರಡಿದ ರೀತಿ, ಇದರಿಂದ ದೇಶಗಳಲ್ಲಿ ಉಂಟಾದ ಗಲಭೆಗಳು ಹೀಗೆ ಎಲ್ಲವನ್ನೂ ಅಧ್ಯಯನ ನಡೆಸಿ ಈ ಕೃತಿಯಲ್ಲಿ ಲೇಖಕರು ಪ್ರಸ್ತುತಪಡಿಸಿದ್ದಾರೆ.
ಖ್ಯಾತ ಲೇಖಕ ಶೇಷಾದ್ರಿಯವರು (26-05-1926) ಹುಟ್ಟಿದ್ದು ಹೊಂಗಸಂದ್ರದಲ್ಲಿ. ತಂದೆ ವೆಂಕಟರಾಮಯ್ಯ, ತಾಯಿ ಪಾರ್ವತಮ್ಮ. ಬೆಂಗಳೂರಿನ (19476) ಸೆಂಟ್ರಲ್ ಕಾಲೇಜಿನಿಂದ ರಸಾಯನ ಶಾಸ್ತ್ರದಲ್ಲಿ ಸ್ವರ್ಣಪದಕದೊಂದಿಗೆ ಎಂ.ಎಸ್ಸಿ. ಪದವೀಧರರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರು. 1980ರಲ್ಲಿ ಕ್ಷೇತ್ರೀಯ (ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು) ಪ್ರಚಾರ ಕಾರ‍್ಯ ನಿರ್ವಹಣೆ, ಸಂಘದ ಪ್ರಧಾನ ಕಾರ‍್ಯದರ್ಶಿಯಾಗಿಯೂ ಆಗಿದ್ದರು.ಸಂಘದ ವೈಚಾರಿಕ ಹಾಗೂ ಸೈದ್ಧಾಂತಿಕ ಬರಹಗಳನ್ನು ಬರೆದರು. ವಿಕ್ರಮ, ಉತ್ಥಾನ-ಕನ್ನಡ ಪತ್ರಿಕೆಗಳಲ್ಲಿ, ಇಂಗ್ಲಿಷ್‌ನ ಆರ್ಗನೈಸರ್, ಹಿಂದಿಯ ಪಾಂಚಜನ್ಯ ಹಾಗೂ ದೇಶದ ಇತರ ಭಾಷೆಗಳ ನಿಯತ ಕಾಲಿಕೆಗಳಲ್ಲಿ ಲೇಖನ, ವಿಮರ್ಶಾತ್ಮಕ ವಿಶ್ಲೇಷಣೆಗಳನ್ನು ಬರೆದರು. ಕೃತಿಗಳು-ಯುಗಾವತಾರ, ಅಮ್ಮಾ ಬಾಗಿಲು ತೆಗೆ, ಚಿಂತನಗಂಗಾ, ದೇಶ ...
READ MORE