‘ಕೃತಾಕೃತ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಮೂರು ಚಿಕ್ಕ ಕಾದಂಬರಿಗಳ ಸಂಕಲನ. ನಾವು ಮಾಡುವ ಅನೇಕ ಕೃತ್ಯಗಳಿಗೆ ನಾವು ಹೊಣೆಯೇ? ಇದಕ್ಕೆ ಉತ್ತರ ಇಲ್ಲ ಎಂದಾದರೆ ಇವೆಲ್ಲಾ ಆ ಭಗವಂತನ ಕೃತ್ಯಗಳೇ? ಅನೇಕ ಸಲ ನಾವು ನಿಮಿತ್ತರಾಗುತ್ತೇವೆ. ಕೆಲವೊಮ್ಮೆ ಒಂದು ಅಗೋಚರ ಶಕ್ತಿ ಕಾರಣವಾಗುತ್ತದೆ. ನಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ದೇವರ ರೂಪ ಎನ್ನಬಹುದೇ ಎಂಬ ಅನೇಕ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಂಕಲನದ ಮೂರು ಕಾದಂಬರಿಗಳು ಶ್ರಮಿಸುತ್ತವೆ.
ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು- ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...
READ MORE