ಸಾಹಿತಿ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ಬರೆದ ನಾಟಕ-ಕುಣಿಯೋಣ ಬಾರ. ಡಾ. ಸಿ.ಎಸ್.ವಿ. ರೆಡ್ಡಿ ಅವರು ಕೃತಿಗೆ ಬರೆದ ಮುನ್ನುಡಿಯಲ್ಲಿ ‘ಈ ನಾಟಕವು ವಿಷಯದ ಆಯ್ಕೆಯಿಂದ ಹಿಡಿದು ಸಂಭಾಷಣೆ, ಸನ್ನಿವೇಶ ಮತ್ತು ಭಾಷೆಯ ಸಿರಿತನವನ್ನು ಹೊಂದಿದ್ದು, ಈ ಪ್ರಯತ್ನದ ಮುಖೇನ ಮೂಢನಂಬಿಕೆಯ ಪ್ರಭಾವಕ್ಕೆ ಒಳಗಾಗಿರುವ ರೈತರ ಮನವೊಲಿಸಿ, ಆಧುನಿಕ ಕೃಷಿಗೆ ಅವರನ್ನು ತೊಡಗಿಸಿಕೊಳ್ಳಲು ವಹಿಸಿರುವ ಪಾತ್ರ ವಿಧಾನ ಮತ್ತು ಸನ್ನಿವೇಶಗಳು ಪ್ರಶಂಸನೀಯ. ಈ ನಾಟಕವು ಚಿಕ್ಕದಾಗಿದ್ದರೂ ಚೊಕ್ಕವಾಗಿದೆ’ ಎಂದು ಪ್ರಶಂಸಿಸಿದ್ದಾರೆ.
ಲೇಖಕ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ನಿಡಸಾಲೆ (ಜನನ: 05-02-1951) ಗ್ರಾಮದವರು. ತಂದೆ- ಮುಳವಾಗಲಯ್ಯ, ತಾಯಿ- ನಿಂಗಮ್ಮ. ನಿಡಸಾಲೆಯಲ್ಲಿ ಪ್ರಾಥಮಿಕ, ಹುಲಿಯೂರುದುರ್ಗದಲ್ಲಿ ಪ್ರೌಢಶಾಲೆಯವರೆಗೆ ವ್ಯಾಸಂಗ ಪೂರ್ಣಗೊಳಿಸಿದರು. 1968ರಲ್ಲಿ ಬೆಂಗಳೂರಿನ ಐ.ಟಿ.ಐ.ನಲ್ಲಿ ತರಬೇತಿ ಪಡೆದು, 1969ರಿಂದ ಕೃಷಿ ಇಲಾಖೆಯಲ್ಲಿ ಉದ್ಯೋಗ ಆರಂಭಿಸಿದರು. ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಪಿ.ಯು.ಸಿ ತೇರ್ಗಡೆ ಯಾಗಿ ಬಿ.ಕಾಂ.ಗೆ ಸೇರ್ಪಡೆಯಾದರು. ಹಿರಿಯ ಸಾಹಿತಿ ಬಿ.ಜಿ. ಸತ್ಯಮೂರ್ತಿಯವರ ಒಡನಾಟದಲ್ಲಿ 1971ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಅವರು ಸಣ್ಣ ಕಥೆ, ನಾಟಕ, ಕಾದಂಬರಿ ಸೇರಿದಂತೆ ಸಾಹಿತ್ಯ ವಿವಿಧ ಪ್ರಕಾರಗಳಲ್ಲಿ ಕೃತಿ ರಚಿಸಿದ್ದಾರೆ. ಕೃತಿಗಳು: ಗೊಲ್ಲಳ್ಳಿ ತೋಟ’, ‘ಸಾಧನೆಯ ...
READ MORE