ಲೇಖಕ ರಾಜಶೇಖರ ಮಠಪತಿ (ರಾಗಂ) ಅವರು ಬರೆದ ಕೃತಿ-ಕುರ್ಬಾನ್ (ಅಸಹನೀಯತೆಯ ಆರದ ಗಾಯಗಳು) ಇದು ಸಾಮಾಜಿಕ ವಿದ್ಯಮಾನಗಳ ಕುರಿತು ಆಘಾಗ ಬರೆದ ಲೇಖನಗಳ ಸಂಗ್ರಹ ಕೃತಿ. ವಿಚಾರ ವೈವಿಧ್ಯತೆ, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ.
ಸಾಹಿತಿ, ಚಿಂತಕ, ಕನ್ನಡ ಸಾಹಿತ್ಯ ಆಕಾಡೆಮಿ ಸದಸ್ಯರಾದ ರಾಜಶೇಖರ ಮಠಪತಿ (ರಾಗಂ) ಅವರು ಹುಟ್ಟಿದ್ದು ಬೆಳಗಾಂವ ಜಿಲ್ಲೆಯ ತೆಲಸಂಗದಲ್ಲಿ. ಕರ್ನಾಟಕದ ಗಡಿಯ ಊರಾದ ಚಡಚಣದಲ್ಲಿ ಪ್ರಾಥಮಿಕದಿಂದ ಪದವಿಪೂರ್ವದ ಶಿಕ್ಷಣ, ನಂತರ ಬಿಜಾಪೂರ ಮತ್ತು ಸೊಲ್ಲಾಪುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ, ಕ.ವಿ.ವಿ ಧಾರವಾಡದಿಂದ ಆಂಗ್ಲ ಸಾಹಿತಿ, ಸಿನಿಮಾ ನಿರ್ದೇಶಕ,ಪತ್ರಕರ್ತ, ಕೆ.ಎ.ಅಬ್ಬಾಸರನ್ನು ಕುರಿತು ಪಿ.ಹೆಚ್.ಡಿ - ಹೀಗೆ ಶೈಕ್ಷಣಿಕ ಬದುಕಿನ ಹಲವು ಹಂತಗಳನ್ನು ಗಳಿಸಿದ್ದಾರೆ. ಇದುವರೆಗೆ ಅವರು ಕನ್ನಡ, ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬರೆದ ಕೃತಿಗಳ ಸಂಖ್ಯೆ ಅರವತ್ತು ಅಂಕಿಯನ್ನು ದಾಟುತ್ತದೆ. ಕಾವ್ಯ, ಕತೆ, ನಾಟಕ, ಪ್ರಬಂಧ, ಅಂಕಣ, ಸಂಶೋಧನೆ, ...
READ MORE