ಲಾಲಾ ಹರದಯಾಳ್ ಅವರ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಎನ್.ಪಿ. ಶಂಕರನಾರಾಯಣ ರಾವ್ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ತೀಕ್ಷ್ಣ ಬುದ್ಧಿಯ ವಿದ್ಯಾರ್ಥಿ ಹರದಯಾಳನಿಗೆ ಇಂಗ್ಲೆಂಡಿನಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಬ್ರಿಟಿಷ್ ಸರ್ಕಾರವೇ ವಿದ್ಯಾರ್ಥಿವೇತನ ನೀಡಿತ್ತು. ಅದನ್ನು ಬಿಟ್ಟು ದೇಶ ಸೇವೆಗೆ ಧುಮುಕಿದ. ಅಮೆರಿಕ, ಸ್ವಿಡ್ಜಲೆಂಡ್, ಸ್ವೀಡನ್, ಜರ್ಮನಿ ಮೊದಲೆದ ಹಲವು ದೂರ ದೇಶಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಬಾಳನ್ನೇ ತೇಯ್ದ ಧೀರ ಎಂದು ಲಾಲಾ ಹರದಯಾಳ್ ಅವರ ಕುರಿತು ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಲಾಲಾ ಹರದಯಾಳ್ ಅವರ ಬಾಲ್ಯದ ದಿನಗಳು, ಬ್ರಿಟಿಷರು ಆತನ್ನು ಗುರುತಿಸಿದ ಪರಿ, ವದ್ಯಾರ್ಥಿ ಜೀವನದಲ್ಲಿ ಎದುರಾದ ತಿರುವುಗಳು, ಸ್ವತಂತ್ರ್ಯ ಹೋರಾಟಕ್ಕೆ ಧುಮುಕಿದರ ಹಿಂದಿನ ಇತಿಹಾಸ ಹೀಗೆ ಅವರ ಬದುಕಿನ ವಿವಿಧ ಆಯಾಮಗಳನ್ನು ಲೇಖಕರು ಈ ಪುಸ್ತಕದಲ್ಲಿ ವಿವರಿಸಿದ್ದಾರೆ.
.ಎನ್.ಪಿ. ಶಂಕರ ನಾರಾಯಣ ರಾವ್ ಅವರು 1928ರ ಆಗಸ್ಟ್ 03ರಂದು ಹಾಸನ ಜಿಲ್ಲೆಯ ನಿಟ್ಟೂರು ಗ್ರಾಮದವರು. ತಂದೆ ಪಟ್ಟಾಭಿರಾಮಯ್ಯ ಹಾಗೂ ತಾಯಿ ಅಚ್ಚಮ್ಮ. ತಂದೆ ಸಬ್ ರಿಜಿಸ್ಟ್ರಾರ್ ಇದ್ದರು. ವರ್ಗಾವಣೆ ಆದ ಕಡೆ ಇವರ ವಿದ್ಯಾಭ್ಯಾಸ ಅನಿವಾರ್ಯವಾಯಿತು. ಬೆಂಗಳೂರಿನ ಶ್ರೀರಾಮಪುರದಲ್ಲಿ ಪ್ರಾಥಮಿಕ ಶಿಕ್ಷಂ, ಕನಕಪುರದ ಕಾನಕಾನಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆನೇಕಲ್ ಹಾಗೂ ಬಸವನಹಳ್ಳಿಯಲ್ಲಿ ಮಾಧ್ಯಮಿಕ ಹಾಗೂ ಮೈಸೂರಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಆ ಕಾಲದಲ್ಲಿ ಸ್ವಾತಂತ್ಯ್ರ ಚಳವಳಿ ಆರಂಭವಾಗಿ, ಜೈಲುವಾಸ ಅನುಭವಿಸಿದರು. ಮೈಸೂರು ಸ್ಟೂಡೆಂಟ್ಸ್ ಯೂನಿಯನ್ ಸ್ಥಾಪಿಸಿ ಎಡ ಪಂಥೀಯ ವಿಚಾರಗಳೊಂದಿಗೆ ಹೋರಾಟ ನಡೆಸಿದರು. ಮೈಸೂರು ಪುರಸಭಾ ಕಾರ್ಮಿಕ ಸಂಘದ ...
READ MORE