ಸಾಹಿತ್ಯ ಅಧ್ಯಯನದ ನೆಲೆಗಳು

Author : ಪಿ. ಚಂದ್ರಿಕಾ

Pages 402

₹ 300.00




Year of Publication: 2017
Published by: ಅಭಿನವ ಪ್ರಕಾಶನ
Address: 17/18-2, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಯಾವ ರೀತಿಯಲ್ಲಿ ಸಾಹಿತ್ಯವನ್ನು ಅಧ್ಯಯನ ಮಾಡಬೇಕು? ಒಂದು ಕಥೆ, ಕವಿತೆ, ಕಾವ್ಯವನ್ನು ಓದುವುದು, ಅದನ್ನು ನಮ್ಮೊಳಗೆ ಇಳಿಸಿಕೊಳ್ಳುವುದು ಹೇಗೆ? ಸಾಹಿತ್ಯಕೃತಿಯ ಓದಿಗೊಂದು ಸಿದ್ದತೆ, ತಿರುಳನ್ನು ಅರಿಯಲು ಪರಿಕರಗಳು ಅಗತ್ಯ. ಜತೆಗೆ ಅಧ್ಯಯನದ ನೆಲೆಯೂ ಸಾಹಿತ್ಯ ಇರಬೇಕು.ಸಾಹಿತ್ಯ ಅಧ್ಯಯನಕ್ಕೆ ಸಂಬಂಧಿಸಿದ ಪಠ್ಯಗಳೆಲ್ಲವೂ ಘನಗಂಭೀರ. ಈ ಮಧ್ಯೆ, ಸಾಹಿತ್ಯಾಸಕ್ತರು, ಸಾಹಿತ್ಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪಿ.ಚಂದ್ರಿಕಾ ಅವರು 'ಸಾಹಿತ್ಯ ಅಧ್ಯಯನದ ನೆಲೆಗಳು' ಕೃತಿಯನ್ನು ಸಂಪಾದಿಸಿದ್ದಾರೆ.ಸಾಹಿತ್ಯ ಅಧ್ಯಯನ ಮತ್ತು ಇತರ ಶೈಕ್ಷಣಿಕ ಶಿಸ್ತುಗಳ ಬಗ್ಗೆ ಎಚ್.ಎಸ್.ರಾಘವೇಂದ್ರರಾವ್, ಸಾಹಿತ್ಯ ಮತ್ತು ಮನಃಶಾಸ್ತ್ರ ಕುರಿತಾಗಿ ಎಂ.ಬಸವಣ್ಣ ಕನ್ನಡ ಸಾಹಿತ್ಯದಲ್ಲಿ ಮನಃಶಾಸ್ತ್ರದ ಅಂಶಗಳ ಬಗ್ಗೆ ಟಿ.ಪಿ.ಆಶೋಕ ಅವರ ಲೇಖನಗಳಿವೆ.

About the Author

ಪಿ. ಚಂದ್ರಿಕಾ

ಚಿತ್ರದುರ್ಗ ಜಿಲ್ಲೆಯ ಚಳ್ಳೆಕೆರೆಯಲ್ಲಿ ಜನಿಸಿದ ಚಂದ್ರಿಕಾ ಅವರು, ಕುವೆಂಪು ವಿಶ್ವವಿದ್ಯಾಲಯದಲ್ಲಿ ತಮ್ಮ ವ್ಯಾಸಂಗವನ್ನು ನಡೆಸಿದರು. ‘ಕನ್ನಡ ಸಾಹಿತ್ಯ ವಿಮರ್ಶೆಯ ಐತಿಹಾಸಿಕ ಅಧ್ಯಯನ’ ಇವರ ಪಿಎಚ್. ಡಿ ಪ್ರಬಂಧ. ಹಲವಾರು ಕಿರುತೆರೆ ಧಾರಾವಾಹಿಗಳು ಮತ್ತು ಸಿನಿಮಾಗಳಿಗೆ ಕಥಾ ವಿಸ್ತರಣೆ, ಸಂಭಾಷಣೆ, ಕಿರುಚಿತ್ರಗಳ ನಿರ್ದೇಶನ, ನಿರ್ಮಾಣ, ನಿರ್ವಹಣೆ, ರಾಜ್ಯಮಟ್ಟದ ವಿಚಾರ ಸಂಕಿರಣ, ವಿಚಾರಗೋಷ್ಠಿಗಳಲ್ಲಿ ಪ್ರಬಂಧ ಮಂಡನೆ, ಕವಿತಾ ವಾಚನ, ಅಭಿನವ ಚಾತುರ್ಮಾಸಿಕ ಪತ್ರಿಕೆಯ ಸಹ ಸಂಪಾದಕಿಯಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸದಸ್ಯೆಯಾಗಿ ಕೆಲಸ ನಿರ್ವಹಣೆ ಮಾಡಿದ ಅನುಭವ ಲೇಖಕಿಯದು. ನಿಮ್ಮ ಚರಿತ್ರೆಯಲ್ಲಿ ನಮಗೆ ಜಾಗವಿಲ್ಲ, ಸೂರ್ಯಗಂಧೀ ...

READ MORE

Related Books