ಲೇಖಕ ಡಾ. ರಾಜೇಂದ್ರ ಚೆನ್ನಿ ಅವರ ಕೃತಿ-ಲೋಕ ವಿಮರ್ಶೆ. ಸಾಹಿತ್ಯ ವಿಮರ್ಶೆ ಎಂದರೆ ಲೋಕ ವಿಮರ್ಶೆ ಎಂಬುದು ವಿಮರ್ಶಕ ಡಿ.ಆರ್. ನಾಗರಾಜ ಅವರ ಪ್ರತಿಪಾದನೆಯಾಗಿತ್ತು. ಈ ವಿಚಾರದ ಸಾಲಿನಲ್ಲಿ ಕೃತಿಯ ಸಮರ್ಥನೆಗಳಿವೆ. ಕಾಲ ಬದಲಾದಂತೆ ವಿಮರ್ಶೆಯ ಮಾನದಂಡಗಳೂ ಬದಲಾಗುತ್ತಿರುವ ಇಂದಿನ ದಿನಮಾನದಲ್ಲಿ ಲೋಕ ವಿಮರ್ಶೆ ಕೃತಿಯು ನಿರ್ದಿಷ್ಟ ದಿಕ್ಕನ್ನು ಸೂಚಿಸುತ್ತದೆ. ಕೃತಿಯ ಅನನ್ಯತೆಯಲ್ಲೇ ವಿಮರ್ಶೆ ಸಾಗಬೇಕು ಎಂಬುದು. ಇಂತಹ ಹೊಳವುಗಳ ಒಳನೋಟವು ಈ ಕೃತಿ ಒಳಗೊಂಡಿದೆ.
ರಾಜೇಂದ್ರ ಚೆನ್ನಿ ಅವರು ಕುವೆಂಪು ವಿ.ವಿ. ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ನಿವೃತ್ತ ಪ್ರಾಧ್ಯಾಪಕರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಗಾಳಿ ಗ್ರಾಮದವರು. 1955ರ ಅಕ್ಟೋಬರ್ 21ರಂದು ಜನನ. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಮೈಸೂರು ವಿ.ವಿ.ಯಿಂದ ಪಿಎಚ್.ಡಿ ಪಡೆದರು. ಸಂಡೂರು, ಬೆಳಗಾವಿ ಸೇರಿದಂತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಹೀಗೆ ವಿವಿಧೆಡೆ ಬೋಧನೆಯ ಸೇವೆ ಸಲ್ಲಿಸಿ, 1981ರಿಂದ 1991ರವರೆಗೆ ಶಿವಮೊಗ್ಗೆಯ ಸಹ್ಯಾದ್ರಿ ಕಾಲೇಜಿನಲ್ಲಿ ಅಧ್ಯಾಪಕರಾಗಿ, ನಂತರ, ಕುವೆಂಪು ವಿ.ವಿ. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದರು. ಕನ್ನಡ-ಇಂಗ್ಲಿಷ್ ಎರಡೂ ಭಾಷೆಯಲ್ಲಿ ವಿಮರ್ಶೆ, ಲೇಖನ ಹಾಗೂ ಕತೆಗಳನ್ನು ಬರೆಯುತ್ತಲೇ ಜನಪರ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. 2009ನೇ ಸಾಲಿನ ಪ್ರತಿಷ್ಠಿತ ಜಿ.ಎಸ್.ಎಸ್. ಪ್ರಶಸ್ತಿ ಪಡೆದಿದ್ದಾರೆ. ಇವರ ಮೊದಲ ...
READ MORE