ಮಾತು ಮತ್ತು ಬರಹದ ನಡುವಿನ ಸಂಬಂಧಗಳು ೆಂತಹದ್ದು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ನುಡಿ ಎಂಬುದು ಮಾತಲ್ಲದೆ ಬರಹವಲ್ಲ; ನುಡಿಯ ಇಲ್ಲವೇ ಮಾತಿನ ಒಂದು ಕ್ರುತಕ ರೂಪವೇ ಬರಹ. ಮಾತು ಮಕ್ಕಳ ಬೆಳವಣಿಗೆಯ ಅಂಗವಾಗಿ ತಲೆಮಾರಿನಿಂದ ತಲೆಮಾರಿಗೆ ಸಾಗುತ್ತಾ ಹೋಗುತ್ತದೆ; ಹಾಗಾಗಿ, ಅದು ಯಾವಾಗಲೂ ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿರುತ್ತದೆ. ಬರಹವನ್ನು ಮಕ್ಕಳಿಗೆ ಕಲಿಸಬೇಕಾಗುತ್ತದೆಯಾದ ಕಾರಣ, ಅದು ಸಮಯ ಕಳೆದಂತೆಲ್ಲ ಹೆಚ್ಚು ಹೆಚ್ಚು ಕ್ರುತಕವಾಗುತ್ತಾ ಹೋಗಿ, ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ; ಅದರಲ್ಲಿ ಜೀವಂತಿಕೆಯನ್ನು ತುಂಬಲು ಅದಕ್ಕೂ ಮಾತಿಗೂ ನಡುವಿರುವ ಅಂತರವನ್ನು ಬರಹಗಾರರು ಕಡಿಮೆ ಮಾಡುತ್ತಿರಬೇಕಾಗುತ್ತದೆ. ಒಟ್ಟಾರೆಯಾಗಿ ಮಾತು ಮತ್ತು ಬರಹದ ನಡುವಿನ ವ್ಯತ್ಯಾಸ, ಸಂಬಂಧವನ್ನು ವಿವರಿಸುವ ಮೂಲಕ ಭಾಷೆಯ ಅಂತರಾಳವನ್ನು ಪರಿಚಯಪಡಿಸಿದ್ದಾರೆ.
©2024 Book Brahma Private Limited.