ಮಾಧ್ಯಮ ರಾಜಕಾರಣ

Author : ಶಿವರಾಮ ಅಸುಂಡಿ

Pages 140

₹ 75.00




Year of Publication: 2012
Published by: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ, ಕಲಬುರಗಿ
Phone: 9448124431

Synopsys

ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆನಿಸಿದ ಮಾಧ್ಯಮಾಂಗ ಸದ್ಯ ಸಂದಿಗ್ಧ ಸ್ಥಿತಿಯಲ್ಲಿದೆ. ಸೇವಾ ಮನೋಭಾವನೆಯನ್ನೇ ಧ್ಯೇಯವಾಗಿಸಿಕೊಂಡ ಮಾಧ್ಯಮ ಉದ್ಯಮ ಸ್ವರೂಪ ಪಡೆದುಕೊಂಡು, ಅದರ ಮುಂದುವರಿದ ಭಾಗವೆಂಬಂತೆ ಮಾಧ್ಯಮ ಕ್ಷೇತ್ರಕ್ಕೆ ರಾಜಕೀಯ ಪ್ರವೇಶ ಮಾಡಿದೆ. ಒಂದು ಕಡೆ ಆಳುವ ಸರ್ಕಾರಗಳು ಪತ್ರಿಕಾ ಸ್ವಾತಂತ್ರ್ಯ ಕಸಿದುಕೊಂಡುವ ಯತ್ನದಲ್ಲಿದ್ದರೆ, ಮತ್ತೊಂದೆ ಕಡೆ ರಾಜಕಾರಣಿಗಳು ಮಾಧ್ಯಮ ಕ್ಷೇತ್ರದಲ್ಲಿ ಪೈಪೋಟಿಗಿಳಿದಿದ್ದಾರೆ. ಹೀಗೆ ದೇಶದಲ್ಲಿ ನಡೆದಿರುವ ಅನಾರೋಗ್ಯಕರ ಪೈಪೋಟಿ ಮತ್ತು ಇತರೆ ವಿಷಯಗಳ ಮೇಲೆ ಮಾಧ್ಯಮ ರಾಜಕಾರಣ ಕೃತಿ ಬೆಳಕು ಚೆಲ್ಲುತ್ತದೆ. ಕಾಸಿಗಾಗಿ ಸುದ್ದಿ, ಟಿ.ಆರ್.ಪಿ. ಲೆಕ್ಕಾಚಾರ ಸೇರಿದಂತೆ ಮಾಧ್ಯಮ ಕ್ಷೇತ್ರದ ವಿವಿಧ ಮಗ್ಗಲುಗಳ ಮೇಲೆ ಕ್ಷ-ಕಿರಣ ಬೀರುವ ಕಾರ್ಯ ಕೃತಿ ಮೂಲಕ ನಡೆದಿದೆ.

About the Author

ಶಿವರಾಮ ಅಸುಂಡಿ

ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಶಿವರಾಮ ಅಸುಂಡಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಅಸುಂಡಿ ಗ್ರಾಮದವರು. ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆ ಆರಂಭಿಸಿ ಮಾಧ್ಯಮದೊಂದಿಗೆ ನಂಟು ಬೆಳೆಸಿಕೊಂಡರು. ಎಂ.ಎ., ಎಂ.ಫಿಲ್., ಪಿಎಚ್.ಡಿ. ಪದವಿ ಪಡೆದಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದಾಗಲೇ ಮಾಧ್ಯಮ ಕ್ಷೇತ್ರ ಪ್ರವೇಶಿಸಿದರು. ಬಳ್ಳಾರಿಯ ’ಈ ನಮ್ಮ ಕನ್ನಡ ನಾಡು’ ದೈನಿಕದಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ .ಟಿ.ವಿ.ಗೆ ಸೇರಿ ಹಾವೇರಿಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. 2004ರಿಂದ ಕಲಬುರಗಿಯಲ್ಲಿ ಈಟಿವಿ ಪ್ರತಿನಿಧಿಯಾಗಿದ್ದಾರೆ.  ’ದು.ನಿಂ.ಬೆಳಗಲಿ ಅವರ ದೇವದಾಸಿ’ ಕಾದಂಬರಿ ಕುರಿತು ಎಂ.ಫಿಲ್. ಪದವಿ ಮಾಡಿರುವ ಅಸುಂಡಿ ಅವರು ಡಾ.ಮಲ್ಲಿಕಾ ಘಂಟಿ ಮಾರ್ಗದರ್ಶನದಲ್ಲಿ ’ದಲಿತ ...

READ MORE

Related Books