ಆನಂದಕಂದ ಕಾವ್ಯನಾಮದಿಂದ ಮನೆಮಾತಾಗಿರುವ ಬೆಟಗೇರಿ ಕೃಷ್ಣಶರ್ಮ ಅವರ ಸಾಮಾಜಿಕ ಕಾದಂಬರಿ ‘ಮಗಳ ಮದುವೆ’. 1930ನೇ ಇಸವಿಯ ರಾಜಕೀಯ ಚಳವಳಿಯ ವಾತಾವರಣವನ್ನು ಹಿನ್ನೆಲೆಯಾಗಿಟ್ಟುಕೊಂಡು ಬರೆದಿರುವುದು ಎಂದು ಲೇಖಕರೇ ಹೇಳಿದ್ದಾರೆ. ಉತ್ತರ ಕರ್ನಾಟಕದ ಜನಜೀವನದ ಚಿತ್ರ ಈ ಕಾದಂಬರಿಯಲ್ಲಿ ಬರುತ್ತದೆ.
ಬೆಟಗೇರಿ ಕೃಷ್ಣಶರ್ಮರ ಕಾವ್ಯನಾಮ-ಆನಂದಕಂದ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ 1900ರ ಏಪ್ರಿಲ್ 16ರಂದು ಜನಿಸಿದರು. ತಂದೆ ಶ್ರೀನಿವಾಸರಾಯರು; ತಾಯಿ ರಾಧಾಬಾಯಿ.. ಕೃಷ್ಣಶರ್ಮರು 12ನೇ ವರ್ಷದವನಿರುವಾಗ ತಂದೆ, 15ನೇ ವರ್ಷಕ್ಕೆ ಅಣ್ಣ ಹಣಮಂತರಾಯ, 18ನೇ ವರ್ಷಕ್ಕೆ ತಾಯಿ ತೀರಿಕೊಂಡರು. ಸ್ವತಃ ಕೃಷ್ಣಶರ್ಮರೆ ತಮ್ಮ 14ನೇ ವಯಸ್ಸಿನಲ್ಲಿ ವಿಷಮಶೀತ ಜ್ವರ ಹಾಗೂ 15ನೇ ವಯಸ್ಸಿಗೆ ಪ್ಲೇಗ್ ನಿಂದ ಬಳಲಿ ಜೀವನುದ್ದಕ್ಕೂ ದುರ್ಬಲ ಕೈ-ಕಾಲುಗಳನ್ನು ಹೊಂದಬೇಕಾಯಿತು. 1928ರಲ್ಲಿ ತುಳಸೀಬಾಯಿಯೊಂದಿಗೆ ಮದುವೆ. ಕೃಷ್ಣಶರ್ಮರು 56 ವಯಸ್ಸಿನವರಿದ್ದಾಗ ಮಗಳು ಹಾಗೂ ಮರು ವರ್ಷವೇ ಪತ್ನಿ ತೀರಿ ಹೋದರು. 5ನೇ ತರಗತಿವರೆಗೆ ಬೆಟಗೇರಿಯಲ್ಲಿ ಪ್ರಾಥಮಿಕ ಶಿಕ್ಷಣ ನಂತರ, ಕಂಪಿಸುವ ಕೈ-ಕಾಲುಗಳೊಂದಿಗೆ 5 ...
READ MORE