‘ಮಹಾಶ್ವೇತೆ’ ಸುಧಾಮೂರ್ತಿ ಅವರ ಕಾದಂಬರಿ. ಸುಮಾರು ಹದಿನೈದು ವರ್ಷಗಳ ಹಿಂದೆ ಬರೆದ ಈ ಕೃತಿ 18 ಮುದ್ರಣಗಳನ್ನು ಕಂಡಿದೆ. ಹಿಂದಿ, ಮರಾಠಿ, ತಮಿಳು, ತೆಲುಗು, ಇಂಗ್ಲಿಷ್ ಮತ್ತು ಗುಜರಾತಿ ಭಾಷೆಗಳಿಗೆ ಅನುವಾದಗೊಂಡಿದೆ. ಚರ್ಮರೋಗವನ್ನು ವಸ್ತುವಾಗಿರಿಸಿಕೊಂಡು ಬರೆದಿರುವ ಈ ಕಾದಂಬರಿಯನ್ನು ಚರ್ಮರೋಗ ತಜ್ಞರು ತಮ್ಮ ರೋಗಿಗಳಿಗೆ ಓದಲು ನೀಡುತ್ತಿರುವುದ ಈ ಕಾದಂಬರಿಯ ಹೆಗ್ಗಳಿಕೆ. ಮರಾಠಿ ಭಾಷೆಯಲ್ಲಿ ಈಗಾಗಲೇ ಎರಡನೇ ಆವೃತ್ತಿಯನ್ನು ಕಂಡಿದೆ.
ಕನ್ನಡ ಹಾಗೂ ಇಂಗ್ಲಿಷ್ ಬರಹಗಾರ್ತಿ, ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಜನಿಸಿದ್ದು 1950 ಆಗಸ್ಟ್ 18ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ. ತಾಯಿ ವಿಮಲಾ, ತಂದೆ ರಾಮಚಂದ್ರ ಕುಲಕರ್ಣಿ. ವೃತ್ತಿಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಇವರು ಕನ್ನಡ ಹಾಗೂ ಇಂಗ್ಲಿಷ್ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. ಅತಿರಿಕ್ತೆ, ಅವ್ಯಕ್ತೆ, ಮಹಾಶ್ವೇತೆ, ಡಾಲರ್ ಸೊಸೆ, ಋಣ, ತುಮುಲ, ಯಶಸ್ವಿ (ಕಾದಂಬರಿ), ಸಾಮಾನ್ಯರಲ್ಲಿ ಅಸಮಾನ್ಯರು (ಅಂಕಣ ಬರಹಗಳು), ಗುಟ್ಟೊಂದು ಹೇಳುವೆ, ಮನದ ಮಾತು (ಅನುಭವ ಕಥನ), ಹಕ್ಕಿಯ ತೆರದಲಿ ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಸುಧಾ ಮೂರ್ತಿ ಅವರಿಗೆ ರೋಟರಿ ...
READ MORE