’ಮನದಾಳದ ಮಾತುಗಳು’ಬಾನುಲಿಯಲ್ಲಿ ಬಿತ್ತರಗೊಂಡ ಚಂದ್ರಕಾಂತ ಕರದಳ್ಳಿಯವರ ಚಿಂತನಗಳ ಸಂಕಲನ. ಇಲ್ಲಿರುವ ಐವತ್ತು ಚಿಂತನಗಳು ಕರದಳ್ಳಿಯವರ ಮನದಾಳದ ಮಾತುಗಳು. ಅವರ ವ್ಯಕ್ತಿತ್ವದ ವಿಚಾರಶುದ್ದಿಯನ್ನು ಈ ಚಿಂತನಗಳಲ್ಲಿ ಓದುಗರು ಸಹಜವಾಗಿ ಅನುಭವಿಸಬಹುದು.
ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು ಯಾದಗಿರಿ ಜಿಲ್ಲೆಯ ಶಹಾಪುರದವರು. 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು. ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...
READ MORE