ಯಾವುದೇ ಸಂಸ್ಥೆಯಲ್ಲಿ ಉದ್ಯೋಗ ಪ್ರಾರಂಭವಾದಾಗ, ಪ್ರತಿ ನೌಕರನಿಗೆ ಆಯಾ ಸಂಸ್ಥೆಯ ಸಂಪೂರ್ಣ ಮಾಹಿತಿ, ಅವನ ಕೆಲಸ ಕೆಲಸದ ರೀತಿ, ನೀತಿ, ನಿಯಮಗಳು, ಜವಾಬ್ದಾರಿ, ಹಕ್ಕು ಬಾಧ್ಯತೆಗಳು, ಇತ್ಯಾದಿಗಳ ತಿಳುವಳಿಕೆ ನೀಡುವುದು ಅವಶ್ಯ. ನೌಕರ ಮಾನಸಿಕವಾಗಿ ಹಾಗೂ ವ್ಯವಹಾರಿಕವಾಗಿ ತನ್ನ ಸಂಸ್ಥೆಯ ಕೆಲಸದ ಜೊತೆ ಹೊಂದಿಕೊಳ್ಳುತ್ತಾನೆ. ಹಾಗೆಯೇ ಸಂಸ್ಥೆ/ ಕಂಪನಿಯ ಕೂಡ ತನ್ನ ಗುರಿಗಳನ್ನು ಸಾಧಿಸಲು ಹಾಗೂ ನೌಕರನ ಸಂಪೂರ್ಣ ಸಾಮರ್ಥ್ಯ ಕೌಶಲಗಳನ್ನು ಉಪಯೋಗಿಸುವ ವಾತಾವರಣ ನಿರ್ಮಾಣ ಮಾಡಬೇಕಾಗುತ್ತದೆ. ಅಲ್ಲದೆ ಇದು ಕಾನೂನಿನ ಒಂದು ಸಹಜ ಕ್ರಿಯೆ ಹಾಗೂ ಕಾರ್ಮಿಕ ಕಾನೂನಿನ ವ್ಯವಹಾರ/ಸಂಬಂಧಿಗಳ ಭದ್ರ ಬುನಾದಿಯ ಅವಶ್ಯಕತೆಯೂ ಹೌದು. ಇದು ಯಶಸ್ವಿಯಾಗಿ, ಪರಿಣಾಮಕಾರಿ ಆಗಬೇಕಾದರೆ ನೌಕರನಿಗೆ ತನ್ನ ಸಂಸ್ಥೆಯ, ತನ್ನ ಕೆಲಸದ ರೀತಿ ನೀತಿಗಳ ಆಡಳಿತ ವೈಖರಿ ಬಗೆಗೆ ಸಂಪೂರ್ಣ ಜ್ಞಾನ ಅರಿವುಬೇಕು. ಈ ದಿಶೆಯಲ್ಲಿ ಪ್ರಾರಂಭಿಕ ಹಂತದಲ್ಲಿ ಅವನಿಗೆ ಸಂಸ್ಥೆಯ ಪರಿಚಯ, ಧ್ಯೇಯ, ಉದ್ದೇಶ, ಗುರಿ, ಮೌಲ್ಯಗಳು, ಸುರಕ್ಷೆ, ಗುಣಮಟ್ಟ, ಪರಿಸರ ಇತ್ಯಾದಿ ನೀತಿಗಳ ಬಗ್ಗೆ, ಕಂಪನಿಯು ಹೊಂದಿರುವ ಬದ್ಧತೆ ಮತ್ತು ಜಾರಿ ಮಾಡುವ ವಿಧಾನದ ಅರಿವು ಇದ್ದರೆ ಇರಬೇಕು. ಈ ನಿಟ್ಟಿನಲ್ಲಿ ಈ ಕೃತಿಯು ಸಹಕಾರಿಯಾಗಬಲ್ಲದು.
©2024 Book Brahma Private Limited.