ಮನೆ ಶಾಲೆ

Author : ಮಹಾಬಲೇಶ್ವರ ರಾವ್

Pages 88

₹ 50.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 080-22161900

Synopsys

ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವ ಹೊಣೆ ಪೋಷಕರದ್ದಾದರೂ, ಶಿಕ್ಷಕರದ್ದು ಪಾತ್ರವೂ ಇದೆ.  ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಮನೆಯ ಮತ್ತು ಶಾಲೆಯ ವಾತಾವರಣ ಪರಸ್ಪರ ಹೇಗೆ ಪೂರಕವಾಗಿರಬೇಕು, ಮಕ್ಕಳಿಗೆ ಮಾರ್ಗದರ್ಶನ ಹೇಗಿರಬೇಕು ಎಂಬುದನ್ನು ಸವಿವರವಾಗಿ ಲೇಖಕರು ಇಲ್ಲಿ ನೀಡಿದ್ದಾರೆ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books