'ಮರೆವು’ ಉಷಾನವರಾತ್ನರಾಂ ಅವರ ಕಾದಂಬರಿಯಾಗಿದೆ. ಬದುಕಿನಲ್ಲಿ ಮರೆವು ಒಂದು ಅರವಳಿಕೆಯಂತೆ. ಆಗಾಗ ತಲೆದೋರುವ ಮಾನಸಿಕ ಘರ್ಷಣೆಗಳು, ಅಕಸ್ಮಾತ್ತಾಗಿ ಸಂಭವಿಸುವ ಅಪಘಾತಗಳು ಕೆಟ್ಟ ಸಂದರ್ಭಗಳು ಮೊದಲಾದುವನ್ನು ಮರೆಯಲು ಅನೇಕರು ನಿದ್ರೆ ಮಾತ್ರೆಗಳಿಗೆ ಮರೆಹೋಗುವುದು ಸಾಮಾನ್ಯ ಇದರ ವಿಶ್ಲೇಷಣೆ ಹೇಗೆ? (ಆಯ್ದಭಾಗ)
ಲೇಖಕಿ ಉಷಾ ನವರತ್ನರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ಎಂ.ವಿ. ಸುಬ್ಬರಾವ್. ತಾಯಿ- ಶಾಂತಾ. ಪ್ರಾರಂಭಿಕ ಶಿಕ್ಷಣವನ್ನು ಶಿವಮೊಗ್ಗದ ಮೇರಿ ಇಮ್ಯಾಕುಲೇಟ್ ಕಾನ್ವೆಂಟ್ ಹಾಗೂ ಬೆಂಗಳೂರಿನ ಮಹಿಳಾ ಸೇವಾ ಸಮಾಜದಲ್ಲಿ ಪೂರ್ಣಗೊಳಿಸಿದರು. ಆನಂತರ ಮೌಂಟ್ ಕಾರ್ಮಲ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯ ಹಾಗೂ ಇತಿಹಾಸದಲ್ಲಿ ಪದವಿ ಪಡೆದರು. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪೂರೈಸಿದರು. ವಿದ್ಯಾರ್ಥಿನಿಯಾಗಿದ್ದಾಗಲೇ ಹಲವು ಲೇಖನಗಳನ್ನು ಪ್ರಕಟಿಸಿದರು. ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಅಂಕಣಗಾರ್ತಿಯಾಗಿದ್ದು, ಗೆಳತಿ ಮತ್ತು ಉಷಾ ಪತ್ರಿಕೆಗಳ ಸಂಪಾದಕಿಯಾಗಿದ್ದರು. ಮಹಿಳಾ ಸೇವಾ ಸಮಾಜದಲ್ಲಿ ಅಧ್ಯಾಪಕಿಯಾಗಿ 27 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ನಾಲ್ಕು ವರ್ಷ ರೀಜನಲ್ ಫಿಲಂ ಸೆನ್ಸಾರ್ ...
READ MORE