ಖ್ಯಾತ ಐತಿಹಾಸಿಕ ಕಾದಂಬರಿಕಾರ ಡಾ. ತ.ರಾ.ಸು (ತ..ತಾ.ಸುಬ್ಬರಾವ್) ಅವರ ಮಾರ್ಗದರ್ಶಿ, ಭಾಗ್ಯಶಿಲ್ಪಿ ಮತ್ತು ಬೆಳಕಿನ ಬೀದಿ ಎಂಬ ಮೂರು ಕಾದಂಬರಿಗಳನ್ನು ಒಂದೆಡೆ ಸೇರಿಸಿದ ಸಂಕಲನವಿದು. ಈ ಮೂರು ಕಾದಂಬರಿಗಳು ಸಾಮಾಜಿಕ ವಿದ್ಯಮಾನಗಳ ವಸ್ತುವನ್ನು ಒಳಗೊಂಡಿದ್ದು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಓದುಗರ ಗಮನ ಸೆಳೆಯುತ್ತವೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...
READ MORE