ಮೆಕಾಲೆಯ ಮಕ್ಕಳು

Author : ಮಹಾಬಲೇಶ್ವರ ರಾವ್

Pages 48

₹ 30.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಶಿವಾನಂದ ಸರ್ಕಲ್ ಹತ್ತಿರ, ಬೆಂಗಳೂರು
Phone: 08022161900

Synopsys

ಬ್ರಿಟಿಷರ ಆಡಳಿತ ಕಾಲದಲ್ಲಿ ಭಾರತೀಯ ಪ್ರತಿಭಾವಂತರಿಗೆ ಇಂಗ್ಲಿಷ್ ಶಿಕ್ಷಣ ಪದ್ಧತಿ ಅಳವಡಿಸಬೇಕೆ ಅಥವಾ ಪ್ರಾಚೀನ ವೇದಪಾಠಗಳು ಮಾತ್ರ ಸಾಕೇ ಎಂಬ ವಿವಾದವೊಂದು ಮುಗಿಲು ಮುಟ್ಟಿತ್ತು. 1835ರ ಸಂದರ್ಭದಲ್ಲಿ ವೈದಿಕ ಸಂಪ್ರದಾಯದ ವಿರೋಧವನ್ನು ಲೆಕ್ಕಿಸದೆ ಹೊಸ ಶಿಕ್ಷಣ ಪದ್ಧತಿ ಬಗ್ಗೆ ಸುಧಾರಣೆಗಳನ್ನೊಳಗೊಂಡ ‘ಮೆಕಾಲೆ ಪರಿಪತ್ರ’ವನ್ನು ಅಂದಿನ ಗವರ್ನರ್ ಜನರಲ್‌ಗೆ ನೀಡಿ, ಭಾರತದಲ್ಲಿ ಇಂಗ್ಲಿಷ್ ಶಿಕ್ಷಣಕ್ಕೆ ನಾಂದಿ ಹಾಡಿದ ಪ್ರಮುಖ ವ್ಯಕ್ತಿ ಥಾಮಸ್ ಬ್ಯಾಬಿಂಗ್ಟನ್ ಮೆಕಾಲೆ.

ಅಂದು ಜಾರಿಯಾದ ಇಂಗ್ಲಿಷ್ ಶಿಕ್ಷಣ ಪದ್ಧತಿಯಿಂದ ಇಂದಿನವರೆಗೂ ನಡೆದು ಬಂದ ಶೈಕ್ಷಣಿಕ ವಿಚಾರಗಳನ್ನು ಲೇಖಕ ಮಹಾಬಲೇಶ್ವರ ರಾವ್ ಪ್ರಸ್ತಾಪಿಸಿದ್ದಾರೆ. ಅದರಿಂದಾದ ಒಳಿತು-ಕೆಡುಕುಗಳೇನು, ಸುಮಾರು 175 ವರ್ಷಗಳ ಹಿಂದೆ ನೆಟ್ಟು ಬೆಳೆಸಿದ ಈ ಪದ್ಧತಿ ಮುಂದೆ ಹಿಡಿದ ದಾರಿಯ ಪರಿಣಾಮಗಳೇನಾಗಿವೆ ಎಂಬುದರ ಮಾಹಿತಿ ಸವಿವರವಾಗಿ ಈ ಪುಸ್ತಕದಲ್ಲಿ ಸಿಗುತ್ತದೆ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books