ಹಿರಿಯ ಲೇಖಕ ಗೊರೂರು ರಾಮಸ್ವಾಮಿ ಅಯ್ಯಂಗಾರ ಅವರು ತಾವು ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿ 1942-43ರಲ್ಲಿ ಜೈಲು ವಾಸ ಅನುಭವಿಸುತ್ತಿದ್ದ ವೇಳೆ ಬರೆದ ಕಾದಂಬರಿ-ಮೆರವಣಿಗೆ. ಇದು ಮಠಾಧೀಶರ ವಿರುದ್ಧ ದಾಳಿಯನ್ನೇ ಮಾಡುತ್ತದೆ. ಮಠಗಳ ಆಚಾರ-ವಿಚಾರಗಳನ್ನು ಖಂಡಿಸುತ್ತದೆ. ಸುಮಾರು 57 ಅಧ್ಯಾಯಗಳ ಮೂಲಕ ಕಾದಂಬರಿಯನ್ನು ಕಟ್ಟಿಕೊಟ್ಟಿದ್ದಾರೆ.
ಈ ಕಾದಂಬರಿಯ ಮೊದಲ ಮುದ್ರಣವು ಸತ್ಯಶೋಧನ ಪ್ರಕಟನಾಲಯವು 1947ರಲ್ಲಿ ಪ್ರಕಟಿಸಿತ್ತು.
ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...
READ MORE