ಕಾದಂಬರಿಗಾರ್ತಿ ಉಷಾ ನವರತ್ನರಾಮ್ ಅವರ ಕಾದಂಬರಿ ‘ಮೊದಲು ಮಾನವನಾಗು’. 1994ರಲ್ಲಿ ಪ್ರಥಮ ಮುದ್ರಣ ಕಂಡ ಈ ಕಾದಂಬರಿ, 2020ರಲ್ಲಿ ಮೂರನೇ ಮುದ್ರಣ ಕಂಡಿದೆ. ಭವಿಷ್ಯ ಜೀವನದ ಸುಭದ್ರ ಹೊಂಗನಸನ್ನು ಕಾಣುತ್ತಿರುವ ಎರಡು ಜೊತೆ ಯುವಪ್ರೇಮಿಗಳ ಕಥೆ ಈ ಕಾದಂಬರಿಯಲ್ಲಿದೆ. ವೈದ್ಯರು ಭಾವುಕತೆಯಿಂದ ವೈಯಕ್ತಿಕವಾಗಿ ರೋಗಿಗಳ ಬದುಕಿನಲ್ಲಿ ಹಸ್ತಕ್ಷೇಪ ಮಾಡಬಾರದು. ಮಾನವರಾಗಿ ಅವರ ರೋಗಕ್ಕೆ ಚಿಕಿತ್ಸೆ ಮಾಡಿದರೆ ಸಾಕು. ಪುರೂರವ ಇದಕ್ಕೊಂದು ನಿದರ್ಶನ.
ಲೇಖಕಿ ಉಷಾ ನವರತ್ನರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ಎಂ.ವಿ. ಸುಬ್ಬರಾವ್. ತಾಯಿ- ಶಾಂತಾ. ಪ್ರಾರಂಭಿಕ ಶಿಕ್ಷಣವನ್ನು ಶಿವಮೊಗ್ಗದ ಮೇರಿ ಇಮ್ಯಾಕುಲೇಟ್ ಕಾನ್ವೆಂಟ್ ಹಾಗೂ ಬೆಂಗಳೂರಿನ ಮಹಿಳಾ ಸೇವಾ ಸಮಾಜದಲ್ಲಿ ಪೂರ್ಣಗೊಳಿಸಿದರು. ಆನಂತರ ಮೌಂಟ್ ಕಾರ್ಮಲ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯ ಹಾಗೂ ಇತಿಹಾಸದಲ್ಲಿ ಪದವಿ ಪಡೆದರು. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪೂರೈಸಿದರು. ವಿದ್ಯಾರ್ಥಿನಿಯಾಗಿದ್ದಾಗಲೇ ಹಲವು ಲೇಖನಗಳನ್ನು ಪ್ರಕಟಿಸಿದರು. ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಅಂಕಣಗಾರ್ತಿಯಾಗಿದ್ದು, ಗೆಳತಿ ಮತ್ತು ಉಷಾ ಪತ್ರಿಕೆಗಳ ಸಂಪಾದಕಿಯಾಗಿದ್ದರು. ಮಹಿಳಾ ಸೇವಾ ಸಮಾಜದಲ್ಲಿ ಅಧ್ಯಾಪಕಿಯಾಗಿ 27 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ನಾಲ್ಕು ವರ್ಷ ರೀಜನಲ್ ಫಿಲಂ ಸೆನ್ಸಾರ್ ...
READ MORE