‘ಮೂಡಣ ಪಡುವಣ’ ಕೃತಿಯು ಅನುಪಮಾ ನಿರಂಜನ ಅವರ ಕಿರುಕಾದಂಬರಿಯಾಗಿದೆ.ಈ ಕೃತಿಯು ಸ್ನೇಹ ಹಾಗೂ ಪ್ರೀತಿಯ ಕಥಾವಸ್ತುವಾಗಿದ್ದು, ಬದುಕಿನ ಸವಾಲುಗಳನ್ನು ತಿಳಿಸುವಂತ್ತಿದೆ. ಕತೆಯಲ್ಲಿ ಬರುವಂತಹ ಸನ್ನಿವೇಶಗಳು ಹಲವಾರು ವಿಚಾರಗಳನ್ನು ಪ್ರಸ್ತುತಪಡಿಸುತ್ತದೆ. ಸಮುದಾಯಗಳ ಕುರಿತ ಚಿತ್ರಣವನ್ನು ಲೇಖಕಿ ಇಲ್ಲಿ ಬಹಳ ವಿಭಿನ್ನವಾಗಿ ಕಟ್ಟಿಕೊಟ್ಟಿದ್ದಾರೆ. ಪ್ರೇಮವೇ ಮುಖ್ಯ ಕಥಾವಸ್ತುವಾಗಿರುವ ಈ ಕಾದಂಬರಿಯಲ್ಲಿ ಸಂಬಂಧಗಳ ಕುರಿತು ಬೆಳಕು ಚೆಲ್ಲುತ್ತದೆ.
ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು. ಕಥಾಸಂಕಲನಗಳು- ...
READ MORE