ರಾಮಾಯಣದ ಕೆಲವು ಅಸಂಭಾವ್ಯ ಸಂಗತಿಗಳಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಸಾಧ್ಯತೆಗಳನ್ನು ತಮ್ಮ ಪರಿಮಿತಿಯಲ್ಲಿ ಗ್ರಹಿಸಿ ಅದನ್ನು ಕಾದಂಬರಿಯುದ್ದಕ್ಕೂ ತೆಗೆದುಕೊಂಡು ಹೋಗಿದ್ದಾರೆ ಲೇಖಕ-ಕಂನಾಡಿಗಾ ನಾರಾಯಣ. ಕೃತಿಗೆ ಬೆನ್ನುಡಿ ಬರೆದಿರುವ ಸುನಂದಾ ಕಡಮೆ, “ದ್ವಾಪರ ಯುಗದ ಆಧುನಿಕ ಜೀವನ ಶೈಲಿ, ಓಡುವ ಕುತೂಹಲವನ್ನು ಇಮ್ಮಡಿಗೊಳಿಸುತ್ತವೆ. ಇದ್ದ ಪಾತ್ರಗಳನ್ನೇ ದುಡಿಸಿಕೊಂಡು, ಕಥನವನ್ನು ಮುರಿದು ಕಟ್ಟುವ ಅಪ್ಪಟ ಕಲೆಗಾರಿಕೆ ನನಗೆ ಒಂದು ರೀತಿಯ ಬೆರಗಿನ ಸ್ಪೂರ್ತಿ” ಎಂದು ಶ್ಲಾಘಿಸಿದ್ದಾರೆ.
ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...
READ MORE