'ಮುನ್ನುಡಿ ಬೆನ್ನುಡಿಗಳ ನಡುವೆ’ ಪ್ರತಿಭಾ ನಂದಕುಮಾರ್ ಅವರ ಇಪ್ಪತ್ತೈದು ವರ್ಷದ ಕಾವ್ಯ ಕೃಷಿಯ ಒಟ್ಟು ಸಂಗ್ರಹ. ‘ನಾವು ಹುಡುಗಿಯರೇ ಹೀಗೆ’ ಎಂಬ ಕವಿತೆಯಿಂದ ಸಾಹಿತ್ಯ ಲೋಕವನ್ನು ಪ್ರವೇಶಿಸಿದ ಪ್ರತಿಭಾ ನಂದಕುಮಾರ್ ಅವರು ಆ ನಂತರ ಅದೇ ಹೆಸರಿನಲ್ಲಿ ಕವನ ಸಂಕಲನ ಪ್ರಕಟಿಸಿದರು. ಆ ಕವನ ಸಂಕಲನ ಪ್ರತಿಭಾ ಅವರನ್ನು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಭಿನ್ನವಾಗಿ ಗುರ್ತಿಸುವಂತೆ ಮಾಡಿತು. ಹಲವಾರು ಕವನ ಸಂಕಲನಗಳನ್ನು ಪ್ರಕಟಿಸಿದರು. ಅವರ ಇಪ್ಪತ್ತೈದು ವರ್ಷಗಳ ಕಾವ್ಯ ಸಂಕಲನಗಳ ಎಲ್ಲ ಕವಿತೆಗಳು ‘ ಮುನ್ನುಡಿ ಬೆನ್ನುಡಿಗಳ ನಡುವೆ ’ ಕೃತಿಯಲ್ಲಿವೆ.
ಲೇಖಕಿ ಪ್ರತಿಭಾ ನಂದಕುಮಾರ್ ಅವರು ಮೂಲತಃ ಬೆಂಗಳೂರಿನವರು. 1955 ಡಿಸೆಂಬರ್ 25ರಂದು ಜನಿಸಿದರು. ತಂದೆ-ವಿ. ಎಸ್. ರಾಮಚಂದ್ರರಾವ್, ತಾಯಿ- ಯಮುನಾಬಾಯಿ. ಬಾಲ್ಯದ ಬಹುದಿನಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಕಳೆದಿರುವ ಪ್ರತಿಭಾ, ಮದ್ರಾಸ್ ವಿಶ್ವವಿದ್ಯಾಲಯದಿಂದ ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದಾರೆ. ಎನ್.ಜಿ.ಎಫ್ನಲ್ಲಿ ಭಾಷಾಂತರಕಾರರಾಗಿ ನಂತರ ಇಂಡಿಯನ್ ಎಕ್ಸ್ಪ್ರೆಸ್, ಡೆಕ್ಕನ್ ಹೆರಾಲ್ಡ್ ಮತ್ತು ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿಯೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪತಿ ನಂದಕುಮಾರ್ ಹಾಗೂ ಮಕ್ಕಳು ಅಭಿರಾಮ್ ಮತ್ತು ಭಾಮಿನಿ ಜೊತೆ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಪ್ರತಿಭಾ ನಂದಕುಮಾರ್ ಕಾವ್ಯಧರ್ಮವನ್ನೇ ...
READ MORE