‘ಮುಸುಗು’ ಕೆ.ವಿ.ತಿರುಮಲೇಶ್ ಅವರ ಕಾದಂಬರಿ. ಒಳಿತು ಸುಮ್ಮನಾದಾಗ ಕೆಡುಕು ಮುನ್ನಲೆಗೆ ಬರುತ್ತದೆ. ಈ ಮಾತನ್ನು ಭವಭೂತಿಯಾದಿಯಾಗಿ ಎಲ್ಲ ದಾರ್ಶನಿಕರೂ ಹೇಳಿದ್ದಾರೆ. ನಮ್ಮ ಕಾಲಕ್ಕಂತೂ ಈ ಮಾತು ಸಮರ್ಪಕವಾಗಿದೆ. ತಿರುಮಲೇಶರ ಈ ಕಾದಂಬರಿ ಕೂಡ ಇದೇ ಆಶಯವನ್ನು ಕೇಂದ್ರವಾಗಿಟ್ಟುಕೊಂಡು ಸುತ್ತಲ ಪರಿಸರದಲ್ಲಿನ ಆಗುಹೋಗುಗಳನ್ನು ಗಮನಿಸುತ್ತದೆ. ಇಲ್ಲಿ ಮುಖ್ಯವಾಗುವುದು: ಒಳಿತ-ಕೆಡುಕಿನ, ಸೋಲು-ಗೆಲುವಿನ ವಿಷಯವಲ್ಲ; ಅಂಥ ಸಂದರ್ಭದಲ್ಲಿ ಮನುಷ್ಯನ ಮನಸ್ಸು ಹೇಗೆ ಸ್ಪಂದಿಸುತ್ತದೆ, ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ, ಅದರ ಪರಿಣಾಮಗಳೇನು ಮುಂತಾಗಿ. ಸಮುದಾಯವು ವ್ಯಕ್ತಿಯ ಆಶಯಗಳನ್ನು ಹೇಗೆ ನಿಯಂತ್ರಿಸುತ್ತದೆ ಮತ್ತು ಅವುಗಳಿಂದ ಆ ವ್ಯಕ್ತಿತ್ವದಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಚಿತ್ರಿಸುತ್ತದೆ. ಕನ್ನಡ ಕಾದಂಬರಿ ಪರಂಪರೆಯಲ್ಲಿ ಭಿನ್ನ ಆಶಯ ಮತ್ತು ನಿರೂಪಣೆಯ ಕಾದಂಬರಿ ಇದು.
ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು. ತಮ್ಮ ಬಾಲ್ಯವನ್ನು (ಜ. 1940) ಕಾಸರಗೋಡಿನ ಕಾರಡ್ಕದಲ್ಲಿ ಮಲೆಯಾಳಿಗಳ ನಡುವೆ ಕಳೆದ ತಿರುಮಲೇಶ್ ಅವರು ತಮ್ಮ ಜೀವನದ ಬಹುತೇಕ ಅವಧಿಯನ್ನು ಕರ್ನಾಟಕದಿಂದ ಹೊರಗಡೆಯೇ ಇದ್ದು ಕಳೆದಿದ್ದಾರೆ. ಹೈದರಾಬಾದ್ ನ ಸೆಂಟ್ರಲ್ ಇನ್ಸ್ ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲ್ಯಾಂಗ್ವೇಜಸ್’ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ‘ಮುಖವಾಡಗಳು’, ‘ವಠಾರ’, ‘ಮಹಾಪ್ರಸ್ಥಾನ’, ಮುಖಾಮುಖಿ’, ‘ಅವಧ’, ‘ಪಾಪಿಯೂ’ ಕವನ ಸಂಕಲನಗಳು. ತಿರುಮಲೇಶ್ ...
READ MORE