ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ಸಾಮಾಜಿಕ ಕಾದಂಬರಿ-ನಾಗರಹಾವು. ಈ ಕಾದಂಬರಿಯು 1972ರಲ್ಲಿ, ಪುಟ್ಟಣ್ಣ ಕಣಗಲ್ ನಿರ್ದೇಶನದಲ್ಲಿ ಚಲನಚಿತ್ರವಾಯಿತು. ಜಾತಿ ಸಂಕೋಲೆಗಳನ್ನು ಮೀರಿ ಕಥಾನಾಯಕ-ನಾಯಕಿ ಮದುವೆಯಾಗುವುದು ಕಥೆಯ ವಸ್ತು. ರಾಮಾಚಾರಿ ನಾಯಕ. ಚಾಮಯ್ಯ ಮೇಷ್ಟ್ರು ಗುರುಗಳು. ಜಾತಿ-ಧರ್ಮ, ಆಚರಣೆಗಳು, ಹಿರಿಯರ ಮಾತನ್ನು ಮೀರದ ಕಟ್ಟಳೆಗಳು, ಆಚರಣೆಗಳ ವಿರುದ್ಧ ಕೋಪ, ಸ್ನೇಹ ಇತ್ಯಾದಿ ಕಾದಂಬರಿಯಲ್ಲಿ ಕಂಡು ಬರುವ ಸಂವೇಗಗಳು.
ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...
READ MORE