ಡಾ. ವಿಜಯಶ್ರೀ ಸಬರದ ಅವರ ಕೃತಿ-ನಡದದ್ದೇ ದಾರಿ. 12ನೇ ಶತಮಾನದ ವಚನಗಳ ವೈಚಾರಿಕತೆ, ಪರಿಶುದ್ಧ ಭಾವದ ಹಿನ್ನೆಲೆಯಲ್ಲಿ ಲೇಖಕಿಯು ತಮ್ಮ ಬರಹದ ಧಾಟಿಯನ್ನು ಅಕ್ಷರಗಳಲ್ಲಿ ಪಡಮೂಡಿಸಿದ್ದಾರೆ. ವಸ್ತುವಿನ ಆಯ್ಕೆ, ಆಕರ್ಷಕ ಹಾಗೂ ಪರಿಣಾಮಕಾರಿ ನಿರೂಪಣಾ ಶೈಲಿ, ಬರಹಕ್ಕಿರುವ ಸಾಮಾಜಿಕ ಹೊಣೆಗಾರಿಕೆಯ ಎಚ್ಚರ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಬರಹಗಳು ಓದುಗರ ಗಮನ ಸೆಳೆಯುತ್ತವೆ.
ಮಹಿಳೆಯರ ಶೋಷಣೆ ಮತ್ತು ಸ್ತ್ರೀಯರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತಮ್ಮ ಖಚಿತ ಅಭಿಪ್ರಾಯ ಮಂಡಿಸುವ ಲೇಖಕಿ ವಿಜಯಶ್ರೀ ಸಬರದ. ಅವರು ಜನಿಸಿದ್ದು 1957ರ ಫೆಬ್ರುವಿರ 1ರಂದು. ತಂದೆ ಗುಣವಂತರಾವ ಪಾಟೀಲ. ತಾಯಿ ಸಂಗಮ್ಮ. ಪ್ರಾರಂಭಿಕ ಶಿಕ್ಷಣ ಹಾಗೂ ಕಾಲೇಜು ಪದವಿ ಶಿಕ್ಷಣವನ್ನು ಬೀದರ್‌ನಲ್ಲಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ’ಅನುಪಮಾ ನಿರಂಜನರ ಕಾದಂಬರಿಗಳು; ಒಂದು ಅಧ್ಯಯನ” ಎಂಬ ಪ್ರಬಂಧ ಮಂಡಿಸಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದರು. ಬೀದರ್‌ನ ಅಕ್ಕ ಮಹಾದೇವಿ ಮಹಿಳಾ ವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ...
READ MORE