ಕವಿ ಎಂ. ಗೋಪಾಲಕೃಷ್ಣ ಅಡಿಗರ ಮೂರನೇ ಕವನ ಸಂಕಲನ-ನಡೆದು ಬಂದ ದಾರಿ. ಜಗತ್ತಿನಲ್ಲಿ ನಮ್ಮ ಸುತ್ತ ಕಾಣುವ ವಸ್ತುಗಳು ಎಷ್ಟು ನಿಜವೋ, ಆ ವಸ್ತುಗಳ ವಿಷಯದಲ್ಲಿ ನಮ್ಮ ಮನಸ್ಸಿನಲ್ಲಿ ಹುಟ್ಟುವ ಭಾವನೆಗಳೂ ಅಷ್ಟೇ ನಿಜ. ಪಂಚಭೌತಿಕವಾದದ್ದು ಕಾವ್ಯಕ್ಕೆ ಎಷ್ಟು ಅಗತ್ಯವೋ, ಅಷ್ಟೇ ನಮ್ಮ ಆದರ್ಶವೂ, ಕಲ್ಪನೆಯೂ, ಕನಸೂ ಅಗತ್ಯ. ಈ ಎರಡೂ ಸೇರಿ ಆದ ಪಾಕವೇ ಕಾವ್ಯ. ವಿದ್ಯಮಾನಗಳ, ಅನುಭವಗಳ, ಆದರ್ಶ ಸ್ವರೂಪದ ಕನಸಿನ ಒಂದಂಶವೂ ಸೇರದೇ ಇದ್ದದ್ದು ಕಾವ್ಯವಾಗಲೀ, ಸಾಹಿತ್ಯವಾಗಲೀ ಆಗಲಾರದು ಎಂದು ಕವಿಗಳು ಈ ಸಂಕಲನದ ಎಲ್ಲ 49 ಕವಿತೆಗಳ ಹಿನ್ನೆಲೆಯಲ್ಲಿ ವಿಶ್ಲೇಷಿಸಿ ಬರೆದ ಮುನ್ನುಡಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡದಲ್ಲಿ ನವ್ಯಕಾವ್ಯಕ್ಕೆ ನಾಂದಿ ಹಾಡಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರನ್ನು ‘ಒಂದು ಜನಾಂಗದ ಕಣ್ಣು ತೆರೆಸಿದ ಕವಿ’ ಎಂದು ಗುರುತಿಸಲಾಗುತ್ತಿತ್ತು. ಅಡಿಗರು 1918ರ ಫೆಬ್ರುವರಿ 18ರಂದು ಜನಿಸಿದರು. ತಂದೆ ರಾಮಪ್ಪ ಮತ್ತು ತಾಯಿ ಗೌರಮ್ಮ. ಬೈಂದೂರಿನಲ್ಲಿ ಶಾಲಾ ಶಿಕ್ಷಣ, ಮೈಸೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಆಯಿತು. ಬಿ.ಎ. ಆನರ್ಸ್ ಪದವಿ (1942) ಗಳಿಸಿದ ನಂತರ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ್ದರು. ಆಮೇಲೆ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿ ಎಂ.ಎ. ಪದವಿ (1947) ಗಳಿಸಿದರು. ಮೈಸೂರಿನ ಶಾರದಾವಿಲಾಸ್ ಕಾಲೇಜಿನಲ್ಲಿ ಉಪನ್ಯಾಸಕ (1948-52), ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ (1952-54) ...
READ MORE