`ನಾಳಿನ ನಾಡಶಿಲ್ಪಿಗೆ' ಎಂಬುದು ಬರಹಗಳ ಪುಸ್ತಕ. ಲೇಖಕ ಎಲ್.ಎಸ್. ಶೇಷಗಿರಿರಾವ್ ರಚಿಸಿದ್ದಾರೆ. ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಈ ಪ್ರಜೆಗಳೇ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಆಳುವ ಪ್ರಭುಗಳನ್ನು ರೂಪಿಸುವ ಎಲ್ಲ ತರಹದ ಹಕ್ಕು ಬಾಧ್ಯತೆಗಳನ್ನು ಪಡೆದವರಾಗಿರುತ್ತಾರೆ. ಮುಂದೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದ ಮಕ್ಕಳಿಗೆ, ಪ್ರಜಾಪ್ರಭುತ್ವ ಪದ್ಧತಿಯ ಮೂಲಭೂತ ಸಿದ್ಧಾಂತ ಹಾಗೂ ಅದು ಕಾರ್ಯ ನಿರ್ವಹಿಸುವ ವೈಖರಿಯನ್ನು ತಿಳಿಸಿಕೊಡುವ ದೃಷ್ಟಿಯಿಂದ ಸೃಜಿಸಲಾದ ಪತ್ರ ಬರಹ ಶೈಲಿಯ ಉಪಯುಕ್ತ ಪುಸ್ತಕ ’ನಾಳಿನ ನಾಡಶಿಲ್ಪಿಗೆ’ ಎಂದು ಈ ಪುಸ್ತಕದ ಕುರಿತಾಗಿ ಇಲ್ಲಿ ವಿವರಿಸಲಾಗಿದೆ.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...
READ MORE