ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇತಿಹಾಸದ ಪ್ರಾಧ್ಯಾಪಕರಾಗಿರುವ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಸಂಸ್ಥಾನದಲ್ಲಿ ಅದರಲ್ಲೂ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದ ಅವಧಿಯಲ್ಲಿ ದಲಿತರ ಸ್ಥಿತಿ-ಗತಿಯ ಸ್ವರೂಪವನ್ನು ಈ ಕೃತಿಯಲ್ಲಿ ಚರ್ಚಿಸಿದ್ದಾರೆ. ಜನಪರವಾಗಿದ್ದ ಆಡಳಿತದ ಅವಧಿ ನಾಲ್ವಡಿ ಅವರದಾಗಿತ್ತು. ಹಲವು ವಿಧಾಯಕ ಕ್ರಮಗಳನ್ನು ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಅವರು ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಶೋಷಿತರ ಸ್ಥಿತಿಯನ್ನು ಕಟ್ಟಿಕೊಡುವ ಪ್ರಯತ್ನವನ್ನು ಸೋಸಲೆಯವರು ಮಾಡಿದ್ದಾರೆ.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎನ್ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದವರು. 1968ರ ಮೇ 20 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣ ಸ್ವಗ್ರಾಮದಲ್ಲಿ ಮುಗಿಸಿ, ಪ್ರೌಢ ಶಿಕ್ಷಣದಿಂದ ಮುಂದಿನ ಓದು ಮೈಸೂರಿನಲ್ಲಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ’ಆಧುನಿಕ ಮೈಸೂರು ಸಂಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ( 1881-1940)’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ (2001) ಪಡೆದರು. ನಮ್ಮ ಗ್ರಾಮಗಳು ಅಂದು ಇಂದು, ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನ, ಭಾರತೀಯ ಸಮಾಜ ಮತ್ತು ದಲಿತರು, ಕರ್ನಾಟಕ ಚರಿತ್ರೆ ಮತ್ತು ಸಾಹಿತ್ಯ, ದಲಿತ ಚರಿತ್ರೆ ...
READ MORE